ಕಲಬುರಗಿ:- 3 ತಿಂಗಳಿಂದ ಸಂಬಳ ಸಿಗದ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು ಗ್ರಂಥಪಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮದಲ್ಲಿ ಜರುಗಿದೆ.
Advertisement
ಭಾಗ್ಯವಂತಿ (40) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಗ್ರಂಥಪಾಲಕಿ. ಮಳಖೇಡ ಗ್ರಾಮ ಪಂಚಾಯತಿಯ ಆವರಣದಲ್ಲಿಯೇ ಸೂಸೈಡ್ ಮಾಡಿಕೊಂಡಿದ್ದಾರೆ. ಕಳೆದ ಮೂರು ತಿಂಗಳಿಂದ ಸಂಬಳ ನೀಡದ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಭಾಗ್ಯವಂತಿ, ಪತ್ರದಲ್ಲಿ ಪಿಡಿಓ ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷರ ಹೆಸರು ಉಲ್ಲೇಖ ಮಾಡಿದ್ದಾರೆ.
ಮಳಖೇಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ಆರಂಭವಾಗಿದೆ.