HomeKarnataka Newsಹಾವೇರಿಯ ಸರ್ಕಾರಿ ವಸತಿ ನಿಲಯದ 32 ವಿದ್ಯಾರ್ಥಿಗಳಿಗೆ ಫಂಗಸ್ ಸೋಂಕು.!

ಹಾವೇರಿಯ ಸರ್ಕಾರಿ ವಸತಿ ನಿಲಯದ 32 ವಿದ್ಯಾರ್ಥಿಗಳಿಗೆ ಫಂಗಸ್ ಸೋಂಕು.!

For Dai;y Updates Join Our whatsapp Group

Spread the love

ಹಾವೇರಿ: ರಾಜ್ಯಾದ್ಯಂತ ಮಳೆರಾಯನ ಅಬ್ಬರ ಜೋರಾಗಿದೆ. ನಿರಂತರ ಮಳೆಯಿಂದ ನಾನಾ ಅವಾಂತರಗಳು ಸೃಷ್ಟಿಯಾಗಿದ್ದು, ಜನರು ಪರದಾಡುತ್ತಿದ್ದಾರೆ. ಮಳೆಯಿಂದ ಡೆಂಗ್ಯೂ ಪ್ರಕರಣ ಹೆಚ್ಚಳ ನಡುವೆ ಮತ್ತೊಂದು ತಲೆನೋವು ಶುರುವಾಗಿದೆ. ಹಾವೇರಿ ಜಿಲ್ಲೆಯ ವಸತಿ ನಿಲಯದ ಮಕ್ಕಳು ಫಂಗಸ್​ನಿಂದ ಬಳಲುತ್ತಿದ್ದಾರೆ.

ಹೌದು ಹಾವೇರಿ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ 32 ಜನ ವಿದ್ಯಾರ್ಥಿಗಳಲ್ಲಿ ಫಂಗಸ್​​ ಲಕ್ಷಣಗಳು ಕಂಡು ಬಂದಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರು ಮಕ್ಕಳಿಗೆ ಚಿಕಿತ್ಸೆ ನೀಡಿದ್ದಾರೆ.

ಕಳೆದ 20 ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಬಟ್ಟೆ ಒಣಗದೆ ವಸತಿ ನಿಲಯದ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಹಸಿಯಾದ ಬಟ್ಟೆ ತೊಟ್ಟು ಶಾಲೆಗೆ ತೆರಳುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಮೈಮೇಲೆ ಗುಳ್ಳೆಗಳು ಏಳುತ್ತಿದ್ದು, ಫಂಗಸ್ ಕಾಣಿಸಿಕೊಂಡಿದೆ.ಈ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!