ಗಾಂಧಿನಗರ:- ಹೃದಯಾಘಾತದಿಂದ 3ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಗುಜರಾತ್‌ನ ಅಹಮದಾಬಾದ್‌ನ ಶಾಲೆಯಲ್ಲಿ ನಡೆದಿದೆ.
ಈ ಘಟನೆ ಇಂದು ಬೆಳಗ್ಗೆ ನಡೆದಿದ್ದು, ಬಾಲಕಿಗೆ ಹೃದಯಾಘಾತವಾಗುವ ದೃಶ್ಯ ಶಾಲೆಯಲ್ಲಿದ್ದ ಸಿಸಿಟಿವಿಯೊಂದರಲ್ಲಿ ಸೆರೆಯಾಗಿದೆ. ದೃಶ್ಯದಲ್ಲಿ ಶಾಲೆಯ ಕಾರಿಡಾರ್‌ನಲ್ಲಿ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ನಿಂತಲ್ಲಿಯೇ ನಿಲ್ಲುತ್ತಾಳೆ. ಬಳಿಕ ಮತ್ತೆ ಮುಂದೆ ಹೋಗಿ ಪಕ್ಕದಲ್ಲಿದ್ದ ಬೆಂಚ್‌ನಲ್ಲಿ ಕುಳಿತುಕೊಳ್ಳುತ್ತಾಳೆ. ಸ್ವಲ್ಪ ಹೊತ್ತು ಕುಳಿತುಕೊಂಡವಳೆ ದಿಢೀರ್ ನೆಲಕ್ಕೆ ಕುಸಿಯುತ್ತಾಳೆ. ಆಗ ಅಲ್ಲೇ ನಿಂತಿದ್ದ ಶಿಕ್ಷಕಿಯರು ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಿದರು. ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.
ಘಟನೆಯಿಂದ ವಿದ್ಯಾರ್ಥಿನಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಒಟ್ಟಿನಲ್ಲಿ ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಆತಂಕ ವನ್ನುಂಟು ಮಾಡಿದೆ.