ಹೃದಯಾಘಾತದಿಂದ 3ನೇ ತರಗತಿ ವಿದ್ಯಾರ್ಥಿನಿ ಸಾವು!

0
Spread the love

ಚಾಮರಾಜನಗರ: ಇತ್ತೀಚೆಗೆ ಚಿಕ್ಕ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಆಟವಾಡುತ್ತಿರುವಾಗಲೋ ಅಥವಾ ಕುಳಿತುಕೊಂಡಿರುವಾಗಲೋ ಏಕಾಏಕಿ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಇದೀಗ 8 ವರ್ಷದ ಪುಟ್ಟ ಹುಡುಗಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಸೆಂಟ್ ಪ್ರಾನ್ಸಿಸ್ ಶಾಲೆಯಲ್ಲಿ ನಡೆದಿದೆ.

Advertisement

ಮೃತ ಬಾಲಕಿಯನ್ನು ಬದನಗುಪ್ಪೆಯ ಗ್ರಾಮದ ಲಿಂಗರಾಜು, ಶೃತಿ ದಂಪತಿಯ ಪುತ್ರಿ ತೇಜಸ್ವಿನಿ (8) ಎಂದು ಗುರುತಿಸಲಾಗಿದೆ. ಬಾಲಕಿ ಬೆಳಗ್ಗೆ ಶಾಲೆಗೆ ಹೋಗಿದ್ದಳು. ತರಗತಿಯಲ್ಲಿ ಶಿಕ್ಷಕರಿಗೆ ನೋಟ್ಸ್ ತೋರಿಸಲು ಹೋಗುತ್ತಿದ್ದಂತೆ ವಿದ್ಯಾರ್ಥಿನಿ ಹೃದಯ ಸ್ತಂಭನದಿಂದ ಕುಸಿದು ಬಿದ್ದಿದ್ದಾಳೆ. ಕುಸಿದು ಬಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕರು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಗೆ ಅಷ್ಟರಲ್ಲಿ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ.


Spread the love

LEAVE A REPLY

Please enter your comment!
Please enter your name here