ಬೆಂಗಳೂರು ಗ್ರಾಮಾಂತರ: ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ನಾಲ್ವರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಲೇಬರ್ ಶೆಡ್ನ ರೂಮ್ನಲ್ಲಿ ನಾಲ್ವರೂ ಮಲಗಿದ್ದ ಸ್ಥಿತಿಯಲ್ಲೇ ಮೃತರಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಮುತ್ಸಂದ್ರ ಗ್ರಾಮದ ಛೋಟಾಸಾಬ್ ಅವರಿಗೆ ಸೇರಿದ ಲೇಬರ್ ಶೆಡ್ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತರು ಅಸ್ಸಾಂ ರಾಜ್ಯದ ಮೂಲದವರಾಗಿದ್ದಾರೆ. ಅವರು ಕೋಕಾಕೋಲಾ ವೇರ್ಹೌಸ್ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಸೌಲಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಾಲ್ವರು ಸಾವಿಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಸಂಬಂಧ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ಹಿನ್ನೆಲೆ ಕುರಿತು ತನಿಖೆ ಮುಂದುವರಿದಿದೆ.



