ಲೋಕ ಅದಾಲತ್‌ನಲ್ಲಿ ಪುನಃ ಒಂದಾದ 4 ಜೋಡಿ

0
4 pairs reunited
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಕೌಟುಂಬಿಕ ಕಾರಣಗಳಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ನಾಲ್ಕು ಜೋಡಿಗಳು ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ ಮೂಲಕ ಮತ್ತೆ ಒಂದುಗೂಡಿದರು.

Advertisement

ಲೋಕ ಅದಾಲತ್‌ನಲ್ಲಿ ಸಮಸ್ಯೆಗಳನ್ನು ಪರಿಹರಿಸಿಕೊಂಡು ಒಂದಾದ ಜೋಡಿಗಳು ಪರಸ್ಪರ ಹಾರ ಬದಲಾಯಿಸಿಕೊಂಡು, ತಿಹಿ ತಿನ್ನಿಸುವ ಮೂಲಕ ಸಂತಸ ಹಂಚಿಕೊಂಡರು. ನ್ಯಾಯಾಧೀಶರು ಮತ್ತು ನ್ಯಾಯವಾದಿಗಳು, ಆಪ್ತರು ಒಂದಾದ ಜೋಡಿಗೆ ಶುಭ ಹಾರೈಸಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡರ, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಕಾಶಿಂ ಚುರಿಖಾನ, ಖಾದರಸಾಬ್ ಬೆನಕಟ್ಟಿ, ವಕೀಲರ ಸಂಘದ ಜಿಲ್ಲಾಧ್ಯಕ್ಷ ಎಂ.ಐ. ಹಿರೇಮನಿಪಾಟೀಲ ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here