ಬೆಳಗಾವಿ:-ನಾಲ್ಕು ವರ್ಷದ ಬಾಲಕಿ ಮೇಲೆ 2024 ರಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗೆ ಶಿಕ್ಷೆ ಪ್ರಕಟಗೊಂಡಿದೆ.
ಬೆಳಗಾವಿಯ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಮ್ ಪುಷ್ಪಲತಾ ಅವರು ಅತ್ಯಾಚಾರದ ಆರೋಪಿಗೆ 20 ವರ್ಷ ಜೈಲು ಮತ್ತು ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆಗೊಳಗಾದ ವ್ಯಕ್ತಿಯನ್ನು ನಿಸಾರ್ ಅಹ್ಮದ್ ಫಕ್ರುಸಾಬ್ ಚಾಪ್ಗಾವ್ ಎಂದು ಗುರುತಿಸಲಾಗಿದೆ. ಘಟನೆ ನಡೆದ ಒಂದೇ ವರ್ಷದಲ್ಲಿ ನ್ಯಾಯಾಲಯ ಪ್ರಕರಣ ಇತ್ಯರ್ಥಗೊಳಿಸಿದೆ.
ಘಟನೆ ಹಿನ್ನೆಲೆ:-
ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫೆ.27, 2024 ರಂದು ನಾಲ್ಕು ವರ್ಷದ ಬಾಲಕಿಗೆ ಚಾಕೊಲೇಟ್ ಕೊಡುವುದಾಗಿ ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ತಿಂಗಳಲ್ಲಿ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸಿದ್ದರು. ಅಂತಿಮವಾಗಿ ಇದೀಗ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.