ಆಷಾಢ ಮಾಸದ 4ನೇ ಶುಕ್ರವಾರ: ಚಾಮುಂಡಿ ತಾಯಿಗೆ ಸಿಂಹವಾಹಿನಿ ಅಲಂಕಾರ!

0
Spread the love

ಮೈಸೂರು:- ಇಂದು ಆಷಾಢಮಾಸದ ನಾಲ್ಕನೇ ಶುಕ್ರವಾರ. ಈ ಹಿನ್ನೆಲೆಯಲ್ಲಿ ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ.

Advertisement

ಚಾಮುಂಡೇಶ್ವರಿ ದೇವಸ್ಥಾನಕ್ಕೆ ವಿವಿಧ ಬಗೆಯ ಹೂಗಳಿಂದ ದೇವಸ್ಥಾನವನ್ನು ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ 4ನೇ ಶುಕ್ರವಾರ ತಾಯಿ ಚಾಮುಂಡೇಶ್ವರಿಯು ಸಿಂಹವಾಹಿನಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ. ಉತ್ಸವ ಮೂರ್ತಿಗೆ ವಿವಿಧ ಬಗೆಯ ಹೂ ಹಾಗೂ ನವಿಲಿನಗರಿ ಹಾರದ ಅಲಂಕಾರ ಮಾಡಲಾಗಿದೆ. ದೇವಾಲಯದ ಆವರಣಕ್ಕೆ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿದೆ. ಮುಂಜಾನೆ 4:30ರಿಂದ ತಾಯಿಗೆ ವಿಶೇಷ ಪೂಜೆ ನೆರವೇರುತ್ತಿದೆ.

ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ಭಕ್ತರು ತಾಯಿಯ ದರ್ಶನ ಪಡೆಯುತ್ತಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳನ್ನು ನಿಷೇಧಿಸಲಾಗಿದೆ.


Spread the love

LEAVE A REPLY

Please enter your comment!
Please enter your name here