ತೀವ್ರ ವಿವಾದಕ್ಕಿಡಾಗಿದ್ದ KIADBಯಿಂದ ಹಂಚಿಕೆಯಾಗಿದ್ದ 5 ಎಕರೆ ಜಾಗ ವಾಪಸ್!

0
Spread the love

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಪತ್ನಿ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 14 ಬದಲಿ ಸೈಟ್​​ಗಳನ್ನು ಇದರ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ ಟ್ರಸ್ಟ್‌ನಿಂದ ಒಂದೇ ಉದ್ದೇಶಕ್ಕೆ ಕೇವಲ 15 ವರ್ಷಗಳ ಅಂತದಲ್ಲಿಯೇ ಎರೆಡೆರಡು ಕಡೆಗಳಲ್ಲಿ ಭೂಮಿಯನ್ನು ಸರ್ಕಾರದಿಂದ ಪಡೆದುಕೊಂಡು ಜನ ಸಾಮಾನ್ಯರಿಗೆ ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ ಬಳಿಕ ತನಿಖೆಗೆ ಹೆದರಿಕೊಂಡು ಇದೀಗ ಕೆಐಡಿಎಬಿ ಸೈಟ್‌ ಅನ್ನು ಮಲ್ಲಿಕಾರ್ಜುನ ಖರ್ಗೆ ಕುಟುಂಬಸ್ಥರು ವಾಪಸ್ ನೀಡಿದ್ದಾರೆ.

Advertisement

ಮಲ್ಲಿಕಾರ್ಜುನ ಖರ್ಗೆ ಕುಟುಂಬದವರು ನಡೆಸುತ್ತಿರುವ ಸಿದ್ಧಾರ್ಥ್ ಟ್ರಸ್ಟ್‌ನಿಂದ ಒಂದೇ ಕಾರಣಕ್ಕೆ, ಒಂದೇ ಸಂಸ್ಥೆಯಿಂದ ಎರಡು ಬಾರಿ ಸರ್ಕಾರಿ ಭೂಮಿಯನ್ನು ಪಡೆದುಕೊಳ್ಳಲಾಗಿದೆ ಎಂದು ಬಿಜೆಪಿ ನಾಯಕ ಹಾಗೂ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಎನ್.ಆರ್. ರಮೇಶ್ ಅವರು ಲೋಕಯುಕ್ತ ಇಲಾಖೆಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬಸ್ಥರು, ಇಬ್ಬರು ಸಚಿವರು ಹಾಗೂ ಹಿರಿಯ IAS ಅಧಿಕಾರಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು.

ಸಿದ್ಧಾರ್ಥ ವಿಹಾರ ಟ್ರಸ್ಟ್‌ನ ಸದಸ್ಯರಾದ ಖರ್ಗೆ ಕುಟುಂಬದ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ ಖರ್ಗೆ, ರಾಹುಲ್ M. ಖರ್ಗೆ, ರಾಧಾಬಾಯಿ M. ಖರ್ಗೆ ಹಾಗೂ ಖರ್ಗೆ ಅವರ ಅಳಿಯ ರಾಧಾಕೃಷ್ಣ ವಿರುದ್ಧ ಭೂ ಕಬಳಿಕೆ ಆರೋಪ ಮಾಡಲಾಗಿತ್ತು. ಜೊತೆಗೆ, ಭೂಮಿ ಹಂಚಿಕೆ ಸಂಬಂಧ ಕೈಗಾರಿಕಾ ಸಚಿವ M.B. ಪಾಟೀಲ್ ಮತ್ತು ಐಎಎಸ್ ಅಧಿಕಾರಿ ಡಾ.ಎಸ್. ಸೆಲ್ವಕುಮಾರ್ ವಿರುದ್ಧ ಲೋಕಾಯುಕ್ತದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಆದರೆ, ಇದೀಗ ತನಿಖೆ ಆರಂಭಕ್ಕೂ ‌ಮುನ್ನವೇ ಕೆಐಎಡಿಬಿಯಿಂದ ಪಡೆದಿದ್ದ ಭೂಮಿಯನ್ನು ಸಿದ್ದಾರ್ಥ ವಿಹಾರ ಟ್ರಸ್ಟ್ ನಿಂದ ವಾಪಸ್ ನೀಡಿ ಪತ್ರ ಬರೆಯಲಾಗಿದೆ.

 


Spread the love

LEAVE A REPLY

Please enter your comment!
Please enter your name here