ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ: ಸಿಎಂ ಸಿದ್ದರಾಮಯ್ಯ

0
Spread the love

ಬೆಂಗಳೂರು, ಅಕ್ಟೋಬರ್ 24: ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಗಾಯಗೊಂಡವರಿಗೆ ಚಿಕಿತ್ಸೆ ಜೊತೆಗೆ ಪರಿಹಾರ ನೀಡಲು ಸರ್ಕಾರದ ಚಿಂತನೆ

Advertisement

ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರು ಸಾವು ಸಂಭವಿಸಿದ್ದು, ಅವರ ಶವಗಳನ್ನು ಹೊರತೆಗೆಯಲಾಗಿದ್ದು, ಉಳಿದಂತೆ 8 ಜನರನ್ನು ರಕ್ಷಣೆ ಮಾಡಲಾಗಿದೆ. ಅವರಲ್ಲಿ ಆರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದವರಿಗೆ ಗಂಭೀರ ಗಾಯಗಳಾಗಿವೆ. ರಕ್ಷಣೆ ಮಾಡಿರುವವರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುತ್ತಿದೆ. ಸಾವನ್ನಪ್ಪಿರುವ 8 ಜನರಿಗೆ ತಲಾ 2 ಲಕ್ಷ ಕಾರ್ಮಿಕ ಇಲಾಖೆಯಿಂದ , 3 ಲಕ್ಷ ಬಿಬಿಎಂಪಿಯಿಂದ , ಒಟ್ಟು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಲಾಗಿದೆ.

ಇದು ರೆವಿನ್ಯೂ ಬಡಾವಣೆಯಾಗಿದ್ದು, ಈ ಕಟ್ಟಡವನ್ನು ಅನಧಿಕೃತವಾಗಿ ಪರವಾನಗಿ ಪಡೆಯದೇ ನಿರ್ಮಿಸಲಾಗಿದೆ. ಅನಧಿಕೃತ ಕಾಮಗಾರಿ ಎಂದು ನೋಟೀಸು ನೀಡಲಾಗಿದ್ದರೂ, ನಿರ್ಮಾಣ ಮಾಡಿರುವುದರಿಂದ, ಸಂಬಂಧಪಟ್ಟ ಎಇಇ ಯನ್ನು ಅಮಾನತುಗೊಳಿಸಲಾಗಿದೆ. ಈ ಪ್ರದೇಶದ ವ್ಯಾಪ್ತಿಗೆ ಬರುವ ವಿಭಾಗೀಯ ಅಧಿಕಾರಿಗೂ ಹಾಗೂ ಎಕ್ಸಿಕ್ಯೂಟಿವ್ ಇಂಜಿನಿಯರ್ ಅವರಿಗೂ ನೋಟೀಸು ಜಾರಿ ಮಾಡುವಂತೆ ಸೂಚನೆ ನೀಡಲಾಗಿದೆ. ಪ್ರಕರಣದಲ್ಲಿ ಗಾಯಗೊಂಡವರಿಗೆ ಚಿಕಿತ್ಸಾ ವೆಚ್ಚ ಭರಿಸುವ ಜೊತೆಗೆ ಪರಿಹಾರವನ್ನೂ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದರು.


Spread the love

LEAVE A REPLY

Please enter your comment!
Please enter your name here