HomeSports News5 ಸಿಕ್ಸ್, 5 ಫೋರ್ ಗಳ ಅಬ್ಬರ: ಕೇವಲ 11 ಎಸೆತಗಳಲ್ಲಿ ವಿಶ್ವದಾಖಲೆ ಬರೆದ ಯುವ...

5 ಸಿಕ್ಸ್, 5 ಫೋರ್ ಗಳ ಅಬ್ಬರ: ಕೇವಲ 11 ಎಸೆತಗಳಲ್ಲಿ ವಿಶ್ವದಾಖಲೆ ಬರೆದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ

For Dai;y Updates Join Our whatsapp Group

Spread the love

ಡಾಂಬುಲಾ: ಕಳೆದ ಪಂದ್ಯದಲ್ಲಿ ಶ್ರೀಲಂಕಾ ಆಟಗಾರರು ನಡೆಸಿದ್ದ ಸ್ಲೆಡ್ಜಿಂಗ್‌ಗೆ ಭಾರತ ‘ಎ’ ತಂಡದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಬ್ಯಾಟ್‌ನಲ್ಲೇ ತಕ್ಕ ಉತ್ತರ ನೀಡಿದ್ದಾರೆ. ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಏಕದಿನ ಸರಣಿಯ ಫೈನಲ್‌ನಲ್ಲಿ ಲಂಕಾ ಬೌಲರ್‌ಗಳ ಮೇಲೆ ಮುಗಿಬಿದ್ದ ಸೂರ್ಯವಂಶಿ, ಬೌಂಡರಿ ಮತ್ತು ಸಿಕ್ಸರ್‌ಗಳ ಸುರಿಮಳೆಗೈದು ಎದುರಾಳಿಗಳ ಲೆಕ್ಕಾಚಾರವನ್ನು ಸಂಪೂರ್ಣವಾಗಿ ಹಾಳು ಮಾಡಿದರು.

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತಕ್ಕೆ ಸೂರ್ಯವಂಶಿ ಸ್ಫೋಟಕ ಆರಂಭ ನೀಡಿದರು. ಕೇವಲ 29 ಎಸೆತಗಳಲ್ಲಿ 10 ಬೌಂಡರಿ ಹಾಗೂ 8 ಸಿಕ್ಸರ್‌ಗಳ ನೆರವಿನಿಂದ 94 ರನ್ ಸಿಡಿಸಿ ಶತಕದ ಅಂಚಿನಲ್ಲಿ ಔಟಾದರು. ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಅವರು ಶ್ರೀಲಂಕಾ ಬೌಲರ್‌ಗಳಿಗೆ ಯಾವುದೇ ಅವಕಾಶ ನೀಡಲಿಲ್ಲ.

ಇನಿಂಗ್ಸ್‌ನ ಆರಂಭದಲ್ಲೇ ಅಬ್ಬರಿಸಿದ ಸೂರ್ಯವಂಶಿ ಕೇವಲ 11 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಹೊಸ ದಾಖಲೆ ಬರೆದರು. ಐದು ಬೌಂಡರಿ ಮತ್ತು ಐದು ಸಿಕ್ಸರ್‌ಗಳೊಂದಿಗೆ ಅರ್ಧಶತಕ ಪೂರೈಸಿದ ಅವರು, ಲಿಸ್ಟ್ ‘ಎ’ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ ಅರ್ಧಶತಕ ಸಿಡಿಸಿದ ಅತಿ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಬಳಿಕದ 18 ಎಸೆತಗಳಲ್ಲಿ ಇನ್ನೂ 44 ರನ್ ಸೇರಿಸಿ ಲಂಕಾ ಬೌಲಿಂಗ್ ದಾಳಿಯನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದರು.

ಕಳೆದ ಪಂದ್ಯದ ಸ್ಲೆಡ್ಜಿಂಗ್‌ಗೆ ಉತ್ತರ ನೀಡುವಂತೆ ಆಡಿದ ಸೂರ್ಯವಂಶಿ, ನಾಲ್ಕನೇ ಓವರ್‌ನಲ್ಲಿ ಸಮುದಿತಾ ಬೌಲಿಂಗ್‌ನಲ್ಲಿ 20 ರನ್, ಏಳನೇ ಓವರ್‌ನಲ್ಲಿ ಕುಗಥಾಸ್ ಮಥುಲನ್ ಬೌಲಿಂಗ್‌ನಲ್ಲಿ 16 ರನ್ ಕಲೆಹಾಕಿ ಮೈದಾನದಲ್ಲಿ ಸಿಕ್ಸರ್‌ಗಳ ಮಳೆಗರೆದರು.

ಸೂರ್ಯವಂಶಿಗೆ ಮತ್ತೊಬ್ಬ ಆರಂಭಿಕ ಬ್ಯಾಟರ್ ಪ್ರಿಯಾಂಶ್ ಆರ್ಯ ಉತ್ತಮ ಸಾಥ್ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ ಕೇವಲ 53 ಎಸೆತಗಳಲ್ಲಿ 132 ರನ್‌ಗಳ ಭರ್ಜರಿ ಜೊತೆಯಾಟ ನಿರ್ಮಿಸಿತು. ಪ್ರಿಯಾಂಶ್ ಆರ್ಯ 24 ಎಸೆತಗಳಲ್ಲಿ 35 ರನ್ (5 ಬೌಂಡರಿ, 1 ಸಿಕ್ಸರ್) ಗಳಿಸಿ ಭಾರತಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟರು.

ಕಳೆದ ಪಂದ್ಯದಲ್ಲಿ ಕೆಣಕಿದ್ದ ಶ್ರೀಲಂಕಾ ಆಟಗಾರರಿಗೆ ಫೈನಲ್‌ನಲ್ಲೇ ವೈಭವ್ ಸೂರ್ಯವಂಶಿ ತಮ್ಮ ಬ್ಯಾಟ್ ಮೂಲಕ ಮರೆಯಲಾಗದ ಉತ್ತರ ನೀಡಿದ್ದಾರೆ. ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ಭಾರತದ ಪರ ಪಂದ್ಯದ ದಿಕ್ಕನ್ನೇ ಬದಲಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!