ಚಿರತೆ ದಾಳಿಗೆ 5 ವರ್ಷದ ಬಾಲಕಿ ಸಾವು; ಕಾಡಂಚಿನಲ್ಲಿ ಮೃತದೇಹ ಪತ್ತೆ!

0
Spread the love

ಚಿಕ್ಕಮಗಳೂರು:- ಕಡೂರು ತಾಲೂಕಿನ ನವಿಲೇಕಲ್ ಗುಡ್ಡದಲ್ಲಿ ಚಿರತೆ ದಾಳಿಯಿಂದ 5 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜರುಗಿದೆ.

Advertisement

ಸಾನ್ವಿ (5) ಮೃತ ಬಾಲಕಿ. ಮನೆಯ ಹಿಂದೆ ಕೊಟ್ಟಿಗೆಯಲ್ಲಿ ಮಗುವಿನ ಮೇಲೆ ಚಿರತೆ ದಾಳಿ ಮಾಡಿದೆ. ಈ ವೇಳೆ ಮಗು ಚೀರಾಟ ಕೇಳಿ ಪೋಷಕರು ಬಂದಿದ್ದಾರೆ. ಅವರ ಎದರಲ್ಲೇ ಚಿರತೆ ಮಗುವನ್ನು ಕಾಡಿಗೆ ಹೊತ್ತೊಯ್ದಿದೆ.

ಸ್ಥಳೀಯರು ಹುಡುಕಾಡಿದಾಗ ಕಾಡಂಚಿನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here