ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಕೊಲೆ ಪ್ರಕರಣದ ಆರೋಪಿಯ ಎನ್‌ಕೌಂಟರ್, ಇದೀಗ ಇಡೀ ದೇಶಾದ್ಯಂತ ಚರ್ಚೆಯಾಗುತ್ತಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲೆತ್ನಿಸಿದ ಆರೋಪಿ ಬಿಹಾರ ಮೂಲದ ರಿತೇಶ್ ಕುಮಾರ್,
Advertisement
ಹುಬ್ಬಳ್ಳಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಇದೀಗ ಹುಬ್ಬಳ್ಳಿಯ ದೇವಾಂಗ ಪೇಟ ರುದ್ರಭೂಮಿಯಲ್ಲಿ ಕೊಲೆಯಾದ 5 ವರ್ಷದ ಬಾಲಕಿಯ ಅಂತ್ಯಕ್ರಿಯೆ ನೇರವೇರಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ನಡೆದ ಮರಣೋತ್ತರ ಪರೀಕ್ಷೆಯ ಬಳಿಕ ಬಾಲಕಿಯ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
ಮಗಳ ಶವವನ್ನು ಕೈಯಲ್ಲಿ ಹೊತ್ತು ತಂದ ತಂದೆ, ದೇವಾಂಗ ಪೇಟ ಸ್ಮಶಾನಕ್ಕೆ ತೆರಳಿ ಕುರುಬ ಸಂಪ್ರದಾಯದಂತೆ ಪೂಜೆ ಮಾಡಿದರು. ಬಳಿಕ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತ್ಯಕ್ರಿಯೆ ನೆರವೇರಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.