ಬೆಂಗಳೂರು: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಹಿನ್ನೆಲೆ ದುಬೈನಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ಬಂದಿಳಿದಿದ್ದಾರೆ.
ಬಳ್ಳಾರಿಯ 35 ಮಂದಿ ಹಾಗೂ ಚಿತ್ರದುರ್ಗದ 15 ಮಂದಿ ಸೇರಿದಂತೆ ಒಟ್ಟು 246 ಮಂದಿ ಕನ್ನಡಿಗರು ಮಾ.4ರಂದು ಶಾರ್ಜಾ ದಿಂದ ಕೊಚ್ಚಿನ್ಗೆ ಬಂದಿಳಿದಿದ್ದರು. ಅಲ್ಲಿಂದ 50 ಮಂದಿಗೆ ಬೆಂಗಳೂರಿಗೆ ವಿಶೇಷ ವಿಮಾನ ವ್ಯವಸ್ಥೆಯನ್ನು ಶಾಸಕ ಬಿ. ನಾಗೇಂದ್ರ ಮಾಡಿದ್ದಾರೆ.
ಇಂದು ಬೆಳಗ್ಗೆ (ಮಾ.5) ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಕೊಚ್ಚಿಯಿಂದ ಬೆಂಗಳೂರಿಗೆ ಆಗಮಿಸಿದ ಕನ್ನಡಿಗರನ್ನು ನಾಗೇಂದ್ರ ಸ್ವಾಗತಿಸಿದರು.
ಸಂಕಷ್ಟದ ಸಂದರ್ಭದಲ್ಲಿಯೇ ನೆರವು ನೀಡಿದ ಶಾಸಕರಿಗೆ ಕನ್ನಡಿಗರು ಕೃತಜ್ಞತೆ ವ್ಯಕ್ತಪಡಿಸಿದ್ದು, ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ ಸಂತಸ ಹಂಚಿಕೊಂಡಿದ್ದಾರೆ.



