68ನೇ ಕಾಮನ್‌ವೆಲ್ತ್ ಸಂಸದೀಯ ಸಮಾವೇಶ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಕೆರೆಬಿಯನ್ ಪೂರ್ವ ದ್ವೀಪ ರಾಷ್ಟ್ರವಾಗಿರುವ ಬಾರ್ಬಡೋಸ್ ದೇಶದ ರಾಜಧಾನಿ ಬ್ರಿಡ್ಜ್‌ಟೌನ್ ನಗರದಲ್ಲಿ ಅಕ್ಟೋಬರ್ 6 ರಿಂದ 10 ರವರೆಗೆ ನಡೆಯಲಿರುವ 68ನೇ ಕಾಮನ್‌ವೆಲ್ತ್ ಸಂಸದೀಯ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಂಡಿದ್ದಾರೆ.

Advertisement

ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಲೋಕಸಭಾಧ್ಯಕ್ಷ ಓಂ ಬಿರ್ಲಾ, ರಾಜ್ಯಸಭೆಯ ಉಪಸಭಾಪತಿ ಹರಿವಂಶ ಮತ್ತಿತರರು ಪಾಲ್ಗೊಂಡಿದ್ದು, ಈ ಸಮಾವೇಶದಲ್ಲಿ ಜಗತ್ತಿನ ವಿವಿಧ ದೇಶಗಳ ಪ್ರತಿನಿಧಿಗಳು, ಲೋಕಸಭಾಧ್ಯಕ್ಷರು, ರಾಜ್ಯಸಭೆಯ ಉಪಸಭಾಪತಿಗಳು, ವಿವಿಧ ರಾಜ್ಯಗಳ ವಿಧಾನಸಭೆ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸಭಾಪತಿಗಳು, ಸಚಿವರು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ದಿಗಳು ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here