69ನೇ ಕನ್ನಡ ರಾಜ್ಯೋತ್ಸವ: ಬೆಂಗಳೂರಿನಲ್ಲಿ ಧ್ವಜಾರೋಹಣ ನೆರವೇರಿಸಿದ CM ಸಿದ್ದರಾಮಯ್ಯ

0
Spread the love

ಬೆಂಗಳೂರು:- 69ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆ, ರಾಜಧಾನಿ ಬೆಂಗಳೂರಿನ ಕ್ರೀಡಾಂಗಣದಲ್ಲಿ CM ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದ್ದಾರೆ.

Advertisement

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ರಾಜ್ಯದ್ಯಂತ ಹಲವು ಶಾಲೆಗಳ ಶಾಲಾ ಮಕ್ಕಳು ಪಾಲ್ಗೊಂಡಿದ್ದು, ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು.

ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಾಲಾ ಮತ್ತು ಪ್ರೌಡ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಮುಖ್ಯ ಅತಿಥಿಗಳಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದರು.


Spread the love

LEAVE A REPLY

Please enter your comment!
Please enter your name here