HomeWorld Newsಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಸಾವಿನ ಸಂಖ್ಯೆ 47ಕ್ಕೆ ಏರಿಕೆ, ನೂರಾರು ಮಂದಿಗೆ ಗಾಯ

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಸಾವಿನ ಸಂಖ್ಯೆ 47ಕ್ಕೆ ಏರಿಕೆ, ನೂರಾರು ಮಂದಿಗೆ ಗಾಯ

For Dai;y Updates Join Our whatsapp Group

ಕೊಲಂಬಿಯಾ: ದಕ್ಷಿಣ ಅಮೆರಿಕದ ಕೊಲಂಬಿಯಾದಲ್ಲಿ ಸಂಭವಿಸಿದ 7.4 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ ಕನಿಷ್ಠ 47 ಮಂದಿ ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.

ಭೂಕಂಪ ಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿ ತೀವ್ರ ಆತಂಕಕಾರಿಯಾಗಿದ್ದು, ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ.

ಭೂಕಂಪದ ಕೇಂದ್ರಬಿಂದು ಕೊಲಂಬಿಯಾದ ಚೊಕೊ ಪ್ರದೇಶದ ಸ್ಯಾನ್ ಜೋಸ್ ಡೆಲ್ ಪಾಲ್ಮಾರ್ ಪಟ್ಟಣದ ಸಮೀಪ ದಾಖಲಾಗಿದೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 7.34ರ ಸುಮಾರಿಗೆ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಪಟ್ಟಣದಿಂದ ಪೂರ್ವಕ್ಕೆ ಸುಮಾರು 3 ಮೈಲಿ ದೂರದಲ್ಲಿತ್ತು ಎಂದು ವರದಿಯಾಗಿದೆ.

ಯುಎಸ್ ಜಿಯೋಲಾಜಿಕಲ್ ಸರ್ವೇ ಹಾಗೂ ಕೊಲಂಬಿಯಾದ ಭೂಕಂಪಶಾಸ್ತ್ರ ಸಂಸ್ಥೆಯ ಮಾಹಿತಿ ಪ್ರಕಾರ, ಭೂಕಂಪವು ಭೂಮಿಯ ಮೇಲ್ಮೈಯಿಂದ ಸುಮಾರು 107 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಇದರ ತೀವ್ರ ಕಂಪನಗಳು ರಾಜಧಾನಿ ಬೊಗೋಟಾ ಸೇರಿದಂತೆ ನೆರೆಯ ಈಕ್ವೆಡಾರ್‌ನಲ್ಲೂ ಅನುಭವವಾಗಿವೆ.

ಭೂಕಂಪದ ತೀವ್ರತೆಗೆ ಹತ್ತಾರು ಕಟ್ಟಡಗಳು ನೆಲಸಮಗೊಂಡಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸೇನೆ ಹಾಗೂ ದುರಂತ ನಿರ್ವಹಣಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಅವಶೇಷಗಳಡಿ ಸಿಲುಕಿರುವವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

6 ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಸ್ಥಗಿತ:

ಭೂಕಂಪದಿಂದ ಕಟ್ಟಡಗಳು ಹಾಗೂ ಮೂಲಸೌಕರ್ಯಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಪಶ್ಚಿಮ ಕೊಲಂಬಿಯಾದ 6 ಪ್ರಮುಖ ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.

ಕಾಲಿ ಸೇರಿದಂತೆ ವಿವಿಧ ನಗರಗಳಲ್ಲಿ ಕಟ್ಟಡಗಳ ಅಡಿಯಲ್ಲಿ ಜನರು ಸಿಲುಕಿರುವ ಸಾಧ್ಯತೆ ಇರುವುದರಿಂದ ರಕ್ಷಣಾ ತಂಡಗಳು ಕಾರ್ಯಾಚರಣೆ ತೀವ್ರಗೊಳಿಸಿವೆ.

ಭೂಕಂಪದ ಪರಿಣಾಮದ ಸಂಪೂರ್ಣ ಪ್ರಮಾಣ ಇನ್ನಷ್ಟೇ ತಿಳಿದುಬರಬೇಕಿದ್ದು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img