Davanagere: ಒಂದೇ ದಿನ 7 ಜನ ಸಾವು: ಸ್ಮಶಾನಕ್ಕಿಲ್ಲ ಜಾಗ, ಅಂತ್ಯಕ್ರಿಯೆಗೆ ಗ್ರಾಮಸ್ಥರ ಪರದಾಟ!

0
Spread the love

ದಾವಣಗೆರೆ: ವಿವಿಧ ಕಾರಣಕ್ಕೆ ಒಂದೇ ದಿನ ಏಳು ಜನ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಹೊಸಕುಂದವಾಡ ಗ್ರಾಮದಲ್ಲಿ ಜರುಗಿದೆ.

Advertisement

ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ!

ಮೃತರಲ್ಲಿ ನಾಲ್ಕು ಜನ ವಯೋಸಹಜದಿಂದ ಸಾವನ್ನಪ್ಪಿದರೆ 3 ಜನ ಅನಾರೋಗ್ಯದಿಂದ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮಾರಿಯಕ್ಕ(70), ಸಂತೋಷ (30), ಈರಮ್ಮ (60), ಸುನಿಲ್ (25), ಶಾಂತಮ್ಮ ( 65)ಬಿಮಕ್ಕ (70), ಎರಡು ದಿನದ ನವಜಾತ ಶಿಶು ಸೇರಿದಂತೆ 7 ಜನ ಸಾವನ್ನಪ್ಪಿರುವುದಾಗಿ ವರದಿ ಆಗಿದೆ.

ಇನ್ನೂ ಮತ್ತೊಂದೆಡೆ ಈ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆಗೆ ಸ್ಮಶಾನ ಇಲ್ಲದೆ ಗ್ರಾಮಸ್ಥರು ಪರದಾಟ ನಡೆಸಿದ್ದಾರೆ. 5000ಕ್ಕು ಅಧಿಕ ಜನಸಂಖ್ಯೆ ಇರುವ ಗ್ರಾಮ ಇದಾಗಿದ್ದು ಇಲ್ಲಿವರೆಗೂ ಪಕ್ಕದ ಗ್ರಾಮಕ್ಕೆ ಹೋಗಿ ಗ್ರಾಮಸ್ಥರು ಶವಸಂಸ್ಕಾರ ಮಾಡುತ್ತಿದ್ದರು. ಆದರೆ ಇತ್ತಿಚೆಗೆ ಹಬ್ಬದ ವಿಚಾರದಲ್ಲಿ ಎರಡು ಗ್ರಾಮಸ್ಥರ ಮಧ್ಯೆ ಮನಸ್ತಾಪ ಉಂಟಾಗಿರುವ ಹಿನ್ನೆಲೆ ಶವಸಂಸ್ಕಾರಕ್ಕೆ ಹಳೆಕುಂದುವಾಡ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ನಿಮ್ಮ ಗ್ರಾಮದಲ್ಲಿ ನೀವು ಶವಸಂಸ್ಕಾರ ಮಾಡಿ ಎಂದು ಅಲ್ಲಿನ ಗ್ರಾಮಸ್ಥರು ಹೇಳುತ್ತಿದ್ದಾರೆ ಎಂದು ಹೊಸಕುಂದವಾಡ ಗ್ರಾಮಸ್ಥರು ಆರೋಪ ಮಾಡಿದ್ದಾರೆ.

ಹೀಗಾಗಿ ಕೂಡಲೇ ಸ್ಮಶಾನಕ್ಕೆ ಜಾಗ ನೀಡುವಂತೆ ಒತ್ತಾಯಿಸಿರುವ ಗ್ರಾಮಸ್ಥರು ಜಿಲ್ಲಾಧಿಕಾರಿಗಳು ಸೇರಿ ತಹಶೀಲ್ದಾರ್ ಮತ್ತು ಇತರೆ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಹೊಸಕುಂದುವಾಡ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here