ಬೇಡಿಕೆ ಈಡೇರಿಕೆಗೆ ಆಗ್ರಹ

0
70th All India Working Committee Meeting
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಇತ್ತೀಚೆಗೆ ಉಡುಪಿಯಲ್ಲಿ ಜರುಗಿದ Construction Workers Federation of India (CWFI) ತಿಂಗಳ ಸಂಘಟನೆಯ 70ನೇ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆಯು ದೇಶದ ಕಟ್ಟಡ ನಿರ್ಮಾಣ ವಲಯ ಹಾಗೂ ಅಲ್ಲಿ ಕೆಲಸ ಮಾಡುತ್ತಿರುವ ಕೋಟ್ಯಾಂತರ ಕಾರ್ಮಿಕರ ಪರಿಸ್ಥಿತಿ ಕುರಿತು ಅವಲೋಕನ ನಡೆಸಿತು.

Advertisement

ಸಭೆಯಲ್ಲಿ ಕಾರ್ಮಿಕರ ಮುಖಂಡರಾದ ಮಾರುತಿ ಚಿಟಗಿ ಮಾತನಾಡಿ, ದೇಶದ ನಿರ್ಮಾಣ ವಲಯದ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುರುವ ವಲಸೆ ಕಾರ್ಮಿಕರ ಬದುಕು ಅಸಹನೀಯವಾಗಿದೆ. ವಲಸೆ ಕಾರ್ಮಿಕರನ್ನು ಅಕ್ಷರಶಃ ಒತ್ತೆಯಾಳುಗಳನ್ನಾಗಿ ಮಾಡಿಕೊಂಡು ಸಾಮಾಜಿಕ ಭದ್ರತೆಗಳಿಂದಲೂ ವಂಚಿತರನ್ನಾಗಿಸಲಾಗಿದೆ. ಶೇ 30ರಷ್ಟು ಮಹಿಳೆಯರು ನಿರ್ಮಾಣ ವಲಯದಲ್ಲಿ ದುಡಿಮೆ ಮಾಡುತ್ತಿದ್ದರೂ ಅವರಿಗೆ ನೀಡಬೇಕಾದ ಕುಶಲ ತರಬೇತಿ ಹಾಗೂ ಕನಿಷ್ಠ ಸಮಾನ ಕೆಲಸಕ್ಕೆ ಸಮಾನ ವೇತನ ಸೌಲಭ್ಯಗಳಿಂದಲೂ ವಂಚಿಸಲಾಗುತ್ತಿದೆ ಎಂದರು.

ರಾಜ್ಯದ ಕಟ್ಟಡ ನಿರ್ಮಾಣ ಕಾರ್ಮಿಕರ ಬೇಡಿಕೆಗಳಾದ ಶೈಕ್ಷಣಿಕ ಸಹಾಯಧನ ಕಡಿತ ಮಾಡಿರುವ ಆದೇಶ ವಾಪಸ್ ಪಡೆಯಬೇಕು, ಹೈಕೋರ್ಟ ಆದೇಶದಂತೆ 2021ರ ಅಧಿಸೂಚನೆ ಅನ್ವಯಿಸಿ ಶೈಕ್ಷಣಿಕ ಧನ ಸಹಾಯ ಬಿಡುಗಡೆ ಮಾಡಬೇಕು, ನೈಜ ಕಾರ್ಮಿಕರ ನೋಂದಣಿ ಮತ್ತು ಮರು ನೋಂದಣಿ ಅರ್ಜಿಗಳನ್ನು ಸಕಾರಣವಿಲ್ಲದೇ ತಿರಸ್ಕರಿಸುವುದು ನಿಲ್ಲಬೇಕು, ಸೌಲಭ್ಯಗಳಿಗಾಗಿ ಸಲ್ಲಿಸಿರುವ ಸಾವಿರಾರು ಅರ್ಜಿಗಳಗಳನ್ನು ಶೀಘ್ರವೇ ವಿಲೇವಾರಿ ಮಾಡಬೇಕು, ಪಿಂಚಣಿದಾರರಿಗೆ ಶೀಘ್ರವೇ ಅವರ ಪಿಂಚಣಿ ಹಣವನ್ನು ಬಿಡುಗಡೆ ಮಾಡಬೇಕು ಇವೇ ಮುಂತಾದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಈ ಎಲ್ಲ ಬೇಡಿಕೆಗಳೊಂದಿಗೆ ಪ್ರತಿಭಟನೆ ನಡೆಸಿ ಗದಗ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವರಾದ ಸಂತೋಷ ಲಾಡ್‌ರವರಿಗೆ ಗದಗ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಮೂಲಕ ಮನವಿ ಸಲಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಸಂಘಟನೆಗಳು ಮುಖಂಡರು, ಕಟ್ಟಡ ನಿರ್ಮಾಣ ಕಾರ್ಮಿಕರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here