71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಕಟ: ಶಾರುಖ್ ಖಾನ್, ವಿಕ್ರಾಂತ್ ಮಾಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ

0
Spread the love

71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳನ್ನು ಇಂದು ಪ್ರಕಟಿಸಲಾಗಿದ್ದು ನಟ ಶಾರುಖ್‌ ಖಾನ್‌ ಹಾಗೂ ವಿಕ್ರಾಂತ್‌ ಮಾಸಿ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಟಿ ರಾಣಿ ಮುಖರ್ಜಿ ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

Advertisement

71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇಂದು ನವದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಆರಂಭಗೊಂಡಿದೆ. 2023ರಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ಇಂದು ರಾಷ್ಟ್ರ ಪ್ರಶಸ್ತಿ ಘೋಷಣೆ ಮಾಡಲಾಗುತ್ತಿದೆ.

‘ಜವಾನ್’ ಸಿನಿಮಾದ ನಟನೆಗಾಗಿ ಶಾರುಖ್ ಖಾನ್ ಹಾಗೂ ‘12th ಫೇಲ್’ ಸಿನಿಮಾದ ನಟನೆಗಾಗಿ ವಿಕ್ರಾಂತ್ ಮಾಸಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಮಿಸೆಸ್ ಚಟರ್ಜಿ ವರ್ಸಸ್ ನಾರ್ವೆ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ರಾಣಿ ಮುಖರ್ಜಿ ಅವರು ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಈ ಮೂಲಕ 33 ವರ್ಷಗಳ ಸಿನಿ ಕರಿಯರ್‌ನಲ್ಲಿ ಶಾರುಖ್ ಖಾನ್ ಮೊದಲ ರಾಷ್ಟ್ರಪ್ರಶಸ್ತಿ ಗೆದ್ದಿದ್ದಾರೆ.


Spread the love

LEAVE A REPLY

Please enter your comment!
Please enter your name here