76ನೇ ಗಣರಾಜ್ಯೋತ್ಸವ ಸಂಭ್ರಮ: ಬೆಂಗಳೂರಿನಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ!

0
Spread the love

ಬೆಂಗಳೂರು:- ಇಂದು ದೇಶಾದ್ಯಂತ 76ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಅದರಂತೆ ನಗರದ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಇಂದು 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಧ್ವಜಾರೋಹಣ ನೆರವೇರಿಸಿದರು.

Advertisement

ಬಳಿಕ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು. ನಂತರ ಪೊಲೀಸರಿಂದ ವಂದನಾ ಗೌರವ ಸ್ವೀಕರಿಸಿ, ಪರೇಡ್‌ ವೀಕ್ಷಿಸಿದ ರಾಜ್ಯಪಾಲರು ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.

ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದು, 8 ಮಂದಿ ಡಿಸಿಪಿ, 17 ಮಂದಿ ಎಸಿಪಿ, 44 ಮಂದಿ ಪಿಐ ಸೇರಿ 1051 ಪೊಲೀಸರ ನಿಯೋಜನೆ ಮಾಡಲಾಗಿತ್ತು. ಇದರ ಜೊತೆಗೆ 114 ಪಿಎಸ್​​ಐ, 58 ಎಎಸ್ಐ, 80 ಸಿಬ್ಬಂದಿ, 30 ಕ್ಯಾಮೆರಾ ಸಿಬ್ಬಂದಿಯಿಂದ ಭದ್ರತೆ ಒದಗಿಸಲಾಗಿದೆ.

ಬಂದೋಬಸ್ತ್​​ಗೆ 10 ಕೆಎಸ್​ಆರ್​ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡನ್ನು ನಿಯೋಜನೆ ಮಾಡಲಾಗಿದೆ. ಇನ್ನೂ ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಮೈದಾನದ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ ಹೇರಲಾಗಿದೆ. ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್​ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.


Spread the love

LEAVE A REPLY

Please enter your comment!
Please enter your name here