777 ಚಾರ್ಲಿ’ ಚಿತ್ರ: ರಕ್ಷಿತ್ ಶೆಟ್ಟಿ ಮುಡಿಗೇರಿದ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ!

0
Spread the love

ಬೆಂಗಳೂರು:-ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು 2021ನೇ ಸಾಲಿನ ಕನ್ನಡ ಸಿನಿಮಾಗಳಿಗೆ ಘೋಷಿಸಲಾಗಿದೆ. ಇದರಲ್ಲಿ ನಟ ರಕ್ಷಿತ್ ಶೆಟ್ಟಿ ಅವರು ಅಭಿನಯಿಸಿದ ‘777 ಚಾರ್ಲಿ’ ಸಿನಿಮಾ ಪ್ರಮುಖ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.

Advertisement

ಅದರಲ್ಲಿ ಸಿನಿಮಾದಲ್ಲಿನ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಅವರು ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ. ಮ್ಯೂಟ್’ ಸಿನಿಮಾದ ಅಭಿನಯಕ್ಕಾಗಿ ಅರ್ಚನಾ ಜೋಯಿಸ್ ಅವರು ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ದೊಡ್ಡಹಟ್ಟಿ ಬೋರೆಗೌಡ’ ಚಿತ್ರಕ್ಕೆ ಮೊದಲನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಲಾಗಿದೆ.

ರತ್ನನ್ ಪ್ರಪಂಚ’ ಸಿನಿಮಾದ ಅಭಿನಯಕ್ಕಾಗಿ ಪ್ರಮೋದ್ ಅವರು ಅತ್ಯುತ್ತಮ ಪೋಷಕ ನಟ ಹಾಗೂ ಉಮಾಶ್ರೀ ಅವರು ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಬಿಸಿಲು ಕುದುರೆ’ ಸಿನಿಮಾದ ಸಂಗೀತಕ್ಕಾಗಿ ಇಮ್ತಿಯಾಜ್ ಸುಲ್ತಾನ್ ಅವರಿಗೆ ‘ಅತ್ಯುತ್ತಮ ಸಂಗೀತ ನಿರ್ದೇಶನ’ ಪ್ರಶಸ್ತಿ ನೀಡಲಾಗಿದೆ. ‘ಕೇಕ್’ ಚಿತ್ರದ ನಟನೆಗೆ ಮಾಸ್ಟರ್ ಅತೀಶ್ ಶೆಟ್ಟಿಗೆ ಅತ್ಯುತ್ತಮ ಬಾಲನಟ ಪ್ರಶಸ್ತಿ ನೀಡಲಾಗಿದೆ. ‘ಭೈರವಿ’ ಸಿನಿಮಾದ ಅಭಿನಯಕ್ಕಾಗಿ ಬೇಬಿ ಭೈರವಿಗೆ ಅತ್ಯುತ್ತಮ ಬಾಲ ನಟಿ ಪ್ರಶಸ್ತಿ ನೀಡಲಾಗಿದೆ.

ವಿಶೇಷ ಸಾಮಾಜಿಕ ಕಳಕಳಿ ಚಿತ್ರ ಪ್ರಶಸ್ತಿಯನ್ನು ‘ಭಾರತದ ಪ್ರಜೆಗಳಾದ ನಾವು’ ಸಿನಿಮಾಗೆ ನೀಡಲಾಗಿದೆ. ಪುನೀತ್ ರಾಜ್​​ಕುಮಾರ್ ನಟನೆಯ ‘ಯುವರತ್ನ’ ಚಿತ್ರಕ್ಕೆ ‘ಅತ್ಯುತ್ತಮ ಜನಪ್ರಿಯ ಮನರಂಜನಾ ಸಿನಿಮಾ’ ಪ್ರಶಸ್ತಿ ಘೋಷಿಸಲಾಗಿದೆ. ‘ಕೇಕ್’ ಸಿನಿಮಾಗೆ ಅತ್ಯುತ್ತಮ ಮಕ್ಕಳ ಚಿತ್ರ ಪ್ರಶಸ್ತಿ ಸಿಕ್ಕಿದೆ. ಶಂಕರ್ ಗುರು ಅವರಿಗೆ ‘ಬಡವ ರಾಸ್ಕಲ್’ ಚಿತ್ರಕ್ಕಾಗಿ ‘ಅತ್ಯುತ್ತಮ ಚೊಚ್ಚಲ ನಿರ್ದೇಶನ’ ಪ್ರಶಸ್ತಿ ನೀಡಲಾಗಿದೆ.


Spread the love

LEAVE A REPLY

Please enter your comment!
Please enter your name here