ಚಿಕ್ಕಮಗಳೂರು: 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಕೆಸವಳಲು ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ. ಬೆಳಗ್ಗೆ ಶಾಲೆಗೆ ತೆರಳುತ್ತಿದ್ದಾಗ ಕುಸಿದು ಬಿದ್ದ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. 13 ವರ್ಷದ ಬಾಲಕಿ ಸೃಷ್ಟಿ ಮೃತಪಟ್ಟ ಬಾಲಕಿಯಾಗಿದ್ದಾಳೆ.
Advertisement
ದಾರದಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸೃಷ್ಟಿ ಶಾಲೆಗೆ ತೆರಳುತ್ತಿದ್ದಾಗ ಹಠಾತ್ ಆಗಿ ಕುಸಿದು ಬಿದ್ದಿದ್ದಾಳೆ. ಹೀಗಾಗಿ ಸೃಷ್ಟಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಆಕೆ ಮೃತಪಟ್ಟಿದ್ದಾಳೆ. ಬಳಿಕ ಪರೀಕ್ಷೆ ನಡೆಸಿದ ಮೂಡಿಗೆರೆಯ ಎಂಜಿಎಂ ಸರ್ಕಾರಿ ಆಸ್ಪತ್ರೆ ವೈದ್ಯರು ಹೃದಯಾಘಾತವಾಗಿದೆ ಎಂದು ಘೋಷಿಸಿದ್ದಾರೆ.