ಕೋಲಾರ: ನಕಲಿ ವೈದ್ಯನ ಯಡವಟ್ಟಿನಿಂದ 8 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ನಡೆದಿದೆ. ತಾನವಿ (8) ಮೃತ ಬಾಲಿಕಿಯಾಗಿದ್ದು,
ಮಾಲೂರು ತಾಲೂಕಿನ ದೊಡ್ಡ ಇಗಲೂರು ಗ್ರಾಮದ ನಿವಾಸಿಯಾಗಿದ್ದಾಳೆ. ಬಾಲಕಿಗೆ ಜ್ವರ ಕಾಣಿಸಿಕೊಂಡ ಕಾರಣ, ಪೋಷಕರು ಸೋಮವಾರದಂದು ಪಕ್ಕದ ಸಂತೇಹಳ್ಳಿ ಗ್ರಾಮದಲ್ಲಿರುವ ಕ್ಲಿನಿಕ್‌ಗೆ ಕರೆದುಕೊಂಡು ಹೋಗಿದ್ದರು.
ಕ್ಲಿನಿಕ್ನಲ್ಲಿ ಮಗುವಿಗೆ ನೀಡಿದ ಇಂಜೆಕ್ಷನ್ನಿಂದ ಬಾಲಕಿ ತೀವ್ರ ಅಸ್ವಸ್ಥಳಾಗಿದ್ದಾಳೆ. ಕೂಡಲೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿಗೆ ಚಿಕತ್ಸೆ ಮಾಡಿದವರು ನಕಲಿ ವೈದ್ಯರೆಂದು ತಿಳಿದುಬಂದಿದ್ದು,
ಅವರು ಕೊಟ್ಟ ಇಂಜೆಕ್ಷನ್ ಪರಿಣಾಮವಾಗಿಯೇ ಬಾಲಕಿ ಸಾವನ್ನಪ್ಪಿದ್ದಾಳೆಂದು ಆರೋಪ ಕೇಳಿಬಂದಿದೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ರಿಯಲ್ಲಿ ಪ್ರಕರಣ ದಾಖಲಾಗಿದೆ.



