ಬೆಂಗಳೂರು:- ಕೊರೊನಾ ಸೋಂಕಿನಿಂದ 85 ವರ್ಷದ ವೃದ್ಧ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ.
Advertisement
ವೈಟ್‌ಫೀಲ್ಡ್ ಮೂಲದ 84 ವರ್ಷದ ವೃದ್ಧ ಉಸಿರಾಟದ ಸಮಸ್ಯೆ ಹಾಗೂ ಅಂಗಾಂಗ ವೈಫಲ್ಯ ಖಾಯಿಲೆಗಳಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಸಹ ಕೋವಿಡ್‌ಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಶನಿವಾರ 108 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಈ ಪೈಕಿ ಐವರಿಗೆ ಕೋವಿಡ್ ಪಾಸಿಟಿವ್ ಬಂದಿದೆ.
ಬೆಂಗಳೂರಲ್ಲಿ 2, ಮೈಸೂರು 2 ಹಾಗೂ ವಿಜಯನಗರದಲ್ಲಿ ಒಂದು ಕೋವಿಡ್ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಕೇಸ್ ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.