ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ಸರಕಾರ, ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಗದಗ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ ಇವರುಗಳ ಸಹಯೋಗದಲ್ಲಿ ನಿಜಸುಖಿ ಹಡಪದ ಅಪ್ಪಣ್ಣನವರ 890ನೇ ಜಯಂತ್ಯುತ್ಸವವನ್ನು ರವಿವಾರ ಮುಂಜಾನೆ 10.30ಕ್ಕೆ ಗದಗ ಶ್ರೀ ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳ ಶಿವಾನುಭವ ಮಂಟಪದಲ್ಲಿ ಆಚರಿಸಲಾಗುವುದು.
ಗದಗ ತೋಂಟದಾರ್ಯ ಸಂಸ್ಥಾನ ಮಠದ ಶ್ರೀ. ಮ.ನಿ.ಪ್ರ.ಜ. ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸುವರು. ವಿ.ಪ ಸಭಾಪತಿ ಬಸವರಾಜ ಹೊರಟ್ಟಿಯವರ ಉಪಸ್ಥಿತಿಯಲ್ಲಿ, ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲರ ಅಧ್ಯಕ್ಷತೆಯಲ್ಲಿ ನಡೆಯುವದು.
ಮುಖ್ಯ ಅತಿಥಿಗಳಾಗಿ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್, ಕರ್ನಾಟಕ ಖಿನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಬಾಗಲಕೋಟಿ ಲೋಕಸಭಾ ಕ್ಷೇತ್ರದ ಪಿ.ಸಿ. ಗದ್ದಿಗೌಡರ, ವಿ.ಪ ಸದಸ್ಯ ಎಸ್.ವಿ. ಸಂಕನೂರ, ಶಾಸಕರಾದ ಪ್ರದೀಪ ಶೆಟ್ಟರ, ಸಿ.ಸಿ. ಪಾಟೀಲ, ಚಂದ್ರು ಲಮಾಣಿ, ನಗರಸಭೆಯ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ ಆಗಮಿಸುವರು.
ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ.ಶಿಖಾ, ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್.ಎಸ್, ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ ಹಾಜರಿರುವರು.
ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಕುಶಲ ಕರ್ಮಿಗಳಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಹುಲಕೋಟಿಯ ಮುಖ್ಯ ಶಿಕ್ಷಕರು ಮತ್ತು ಸಾಹಿತಿಗಳಾದ ಎ.ವಿ. ಪ್ರಭು ಹಡಪದ ಅಪ್ಪಣ್ಣನವರ ಜೀವನ ಮತ್ತು ಸಂದೇಶ ಕುರಿತು ಉಪನ್ಯಾಸ ಮಾಡುವರು. ಕೆ.ಟಿ. ಭಜಂತ್ರಿ ವಚನ ಸಂಗೀತ ನಡೆಸುವರು. ವಿಶೇಷ ಆಮಂತ್ರಿತರಾಗಿ ಗದಗ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಅಧ್ಯಕ್ಷ ಮೋಹನ ಚಂದಪ್ಪನವ, ಕಲ್ಲಪ್ಪ ಹಡಪದ, ಸೋಮಣ್ಣ ಹಡಪದ, ಕಲ್ಲೇಶಪ್ಪ ಕುಡಗುಂಟಿ, ರಾಮಚಂದ್ರಪ್ಪ ಲಾಯದಗುಂದಿ, ದೇವು ಹಡಪದ, ಪುಟ್ಟರಾಜ ಹಡಪದ, ಮಲ್ಲಿಕಾರ್ಜುನ ಹಡಪದ ಮೊದಲಾದವರು ಆಗಮಿಸುವರು.