HomeKarnataka Newsಹಾಸ್ಟೆಲ್ ಶೌಚಾಲಯದಲ್ಲಿ ಕುಸಿದು 8ನೇ ತರಗತಿ ವಿದ್ಯಾರ್ಥಿನಿ ಸಾವು: ಹೃದಯಾಘಾತ ಶಂಕೆ?

ಹಾಸ್ಟೆಲ್ ಶೌಚಾಲಯದಲ್ಲಿ ಕುಸಿದು 8ನೇ ತರಗತಿ ವಿದ್ಯಾರ್ಥಿನಿ ಸಾವು: ಹೃದಯಾಘಾತ ಶಂಕೆ?

For Dai;y Updates Join Our whatsapp Group

ತುಮಕೂರು: ತಾಲೂಕಿನ ರಂಗಸಮುದ್ರ ಗ್ರಾಮದ ಬಳಿಯ ಕಸ್ತೂರಿಬಾ ಗಾಂಧಿ ಬಾಲಕಿಯರ ಹಾಸ್ಟೆಲ್‌ನಲ್ಲಿ 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ದಿಢೀರ್ ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ.

ಕಾರಗಾನಹಟ್ಟಿ ಗ್ರಾಮದ ನರಸಿಂಹಮೂರ್ತಿ ಮತ್ತು ಶಾರದಮ್ಮ ದಂಪತಿಯ 14 ವರ್ಷದ ಪುತ್ರಿ ಪ್ರಿಯಾಂಕಾ ಮೃತಪಟ್ಟ ವಿದ್ಯಾರ್ಥಿನಿ. ಈಕೆ ರಂಗಸಮುದ್ರದ ತ್ರಿಯಂಬಕೇಶ್ವರ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.

ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಿಯಾಂಕಾ ಚಿಕಿತ್ಸೆಗಾಗಿ ಸ್ವಗ್ರಾಮಕ್ಕೆ ತೆರಳಿದ್ದಳು. ಆರೋಗ್ಯ ಸುಧಾರಿಸಿದ ಬಳಿಕ ಆಗಸ್ಟ್ 7ರಂದು ಮತ್ತೆ ಹಾಸ್ಟೆಲ್‌ಗೆ ಮರಳಿದ್ದಳು ಎನ್ನಲಾಗಿದೆ.

ಶನಿವಾರ ಮುಂಜಾನೆ ಹಾಸ್ಟೆಲ್‌ನ ಶೌಚಾಲಯಕ್ಕೆ ತೆರಳಿದ್ದ ವೇಳೆ ಪ್ರಿಯಾಂಕಾ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾಳೆ. ತಕ್ಷಣ ಹಾಸ್ಟೆಲ್ ಸಿಬ್ಬಂದಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಆಕೆ ಮೃತಪಟ್ಟಿದ್ದಾಳೆ.

ಬಾಲಕಿಗೆ ಹೃದಯಾಘಾತವಾಗಿರಬಹುದು ಎಂದು ಶಂಕಿಸಲಾಗಿದ್ದು, ಸಾವಿಗೆ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ವರದಿ ಬಳಿಕ ತಿಳಿದುಬರಬೇಕಿದೆ.

ಘಟನೆಯ ಬಳಿಕ ಹಾಸ್ಟೆಲ್‌ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಎಂದು ಪೋಷಕರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದು ಪಾವಗಡ ತಹಶೀಲ್ದಾರ್ ವೈ. ರವಿ ಹಾಗೂ ಪಾವಗಡ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಬಾಲಕಿಯ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಘಟನೆ ಸಂಬಂಧ ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img