HomeKarnataka Newsತಮಿಳುನಾಡಿಗೆ ಜೂನ್ʼನಲ್ಲಿ 9.19 ಟಿಎಂಸಿ ನೀರು ಬಿಡುಗಡೆ: 81 ಅಡಿಗೆ ಇಳಿದ KRS ಜಲಮಟ್ಟ

ತಮಿಳುನಾಡಿಗೆ ಜೂನ್ʼನಲ್ಲಿ 9.19 ಟಿಎಂಸಿ ನೀರು ಬಿಡುಗಡೆ: 81 ಅಡಿಗೆ ಇಳಿದ KRS ಜಲಮಟ್ಟ

For Dai;y Updates Join Our whatsapp Group

Spread the love

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆರಂಭವಾಗದ ಹಿನ್ನೆಲೆ, ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದ ನೀರಿನ ಮಟ್ಟ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ಸದ್ಯ ನೀರಿನ ಮಟ್ಟ 81 ಅಡಿಗೆ ಇಳಿದಿದ್ದು, ಜಲಾಶಯ ಬಹುತೇಕ ಖಾಲಿಯಾಗುವ ಹಂತ ತಲುಪಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ 108 ಅಡಿ ನೀರು ಸಂಗ್ರಹವಾಗಿದ್ದರೆ, ಈ ಬಾರಿ ಮಳೆಯ ಅಭಾವದಿಂದ ನೀರಿನ ಮಟ್ಟದಲ್ಲಿ ಭಾರೀ ಇಳಿಕೆ ಕಂಡುಬಂದಿದೆ.

ಜಲಾಶಯದಲ್ಲಿ ಸದ್ಯ 11.399 ಟಿಎಂಸಿ ನೀರು ಮಾತ್ರ ಸಂಗ್ರಹವಿದೆ. ಇದರಲ್ಲಿ ಸುಮಾರು 5 ಟಿಎಂಸಿ ಡೆಡ್ ಸ್ಟೋರೇಜ್ ಆಗಿರುವುದರಿಂದ, ಬಳಕೆಗೆ ಲಭ್ಯವಿರುವ ನೀರಿನ ಪ್ರಮಾಣ ಕೇವಲ 6 ಟಿಎಂಸಿ ಮಾತ್ರವಾಗಿದೆ. 2019ರ ಬಳಿಕ ಇದೇ ಮೊದಲ ಬಾರಿಗೆ ಜಲಾಶಯದ ನೀರಿನ ಮಟ್ಟ 80 ಅಡಿ ಸಮೀಪಕ್ಕೆ ತಲುಪಿರುವುದು ಆತಂಕ ಹೆಚ್ಚಿಸಿದೆ.

ಕೆಆರ್‌ಎಸ್ ಜಲಾಶಯದ ನೀರು ಬೆಂಗಳೂರು ಸೇರಿದಂತೆ ಹಲವು ನಗರಗಳಿಗೆ ಕುಡಿಯುವ ನೀರಿನ ಪ್ರಮುಖ ಮೂಲವಾಗಿದೆ. ಹೀಗಾಗಿ ಮುಂಗಾರು ಮಳೆ ಶೀಘ್ರ ಚುರುಕುಗೊಳ್ಳದಿದ್ದರೆ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇನ್ನೊಂದೆಡೆ, ಕಾವೇರಿ ನೀರು ಹಂಚಿಕೆ ನಿಯಮಾವಳಿಗಳ ಪ್ರಕಾರ ಜೂನ್ ತಿಂಗಳಲ್ಲಿ ಕರ್ನಾಟಕವು ತಮಿಳುನಾಡಿಗೆ 9.19 ಟಿಎಂಸಿ ನೀರನ್ನು ಹರಿಸಬೇಕಿದೆ. ಆದರೆ ಜಲಾಶಯದಲ್ಲಿರುವ ಬಳಕೆಯೋಗ್ಯ ನೀರಿನ ಪ್ರಮಾಣವೇ ಕೇವಲ 6 ಟಿಎಂಸಿ ಆಗಿರುವುದು ಹೊಸ ಸವಾಲು ಸೃಷ್ಟಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!