ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ

0
narega
Spread the love

ವಿಜಯಸಾಕ್ಷಿ ಸುದ್ದಿ, ಗದಗ : 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೆ ನಿರ್ಭೀತರಾಗಿ ಮತದಾನವನ್ನು ಮಾಡಲೇಬೇಕು ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ ಹೇಳಿದರು.

Advertisement

ತಾಲೂಕಿನ ಹುಯಿಲಗೋಳ ಗ್ರಾ.ಪಂ ವ್ಯಾಪ್ತಿಯ ಹಿರೇಕೊಪ್ಪ ಗ್ರಾಮದಲ್ಲಿ ಪ್ರಗತಿಯಲ್ಲಿರುವ ಬದು ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಹಾಜರಿದ್ದ ಕೂಲಿಕಾರರಿಗೆ ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಅಂಗವಾಗಿ ಮತದಾನ ಜಾಗೃತಿ ಮೂಡಿಸಿ ಅವರು ಮಾತನಾಡಿದರು.

ಅರ್ಹರೆಲ್ಲರೂ ಮತದಾನ ಮಾಡುವುದರ ಮೂಲಕ ಜಿಲ್ಲೆಯಲ್ಲಿ ಈ ಬಾರಿ ಶೇ. 100ರಷ್ಟು ಮತದಾನ ಮಾಡಿಸುವುದು ನಮ್ಮ-ನಿಮ್ಮೆಲ್ಲರ ಗುರಿ ಆಗಿದೆ. ಮೇ 7ನೇ ತಾರೀಖಿನಂದು ನಮ್ಮ ಭಾಗದಲ್ಲಿ ನಡೆಯುವ ಲೋಕಸಭೆ ಚುನಾವಣೆಯ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸೋಣ ಎಂದು ಮನವಿ ಮಾಡಿದರು.

ಹಾಜರಿದ್ದ ನರೇಗಾ ಕೂಲಿಕಾರರಿಗೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಾಸು ಪೂಜಾರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ ಸಿಬ್ಬಂದಿಗಳು, ನರೇಗಾ ಐ.ಇ.ಸಿ ಸಂಯೋಜಕ ವಿರೇಶ್, ಬಿಎಫ್‌ಟಿ ಬಸವರಾಜ್ ಪಟ್ಟಣದ, ಗ್ರಾ.ಕಾ.ಮಿ ಸಾವಿತ್ರಿ ಕಾಳೆ ಹಾಗೂ ನರೇಗಾ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here