ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ರಾಜ್ಯದಲ್ಲಿ ಕಳೆದ ವರ್ಷಕ್ಕಿಂತಲೂ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಭತ್ತದ ಬೆಳೆಯನ್ನು ರೈತರು ನಾಟಿ ಮಾಡಿದ್ದಾರೆ. ಸರ್ಕಾರ ತಕ್ಷಣ ರೈತರ ಹಿತ ಕಾಪಾಡಿ ಸೂಕ್ತ ಬೆಂಬಲ ಬೆಲೆ ಘೋಷಿಸಬೇಕು ಎಂದು ವಿಎಸ್ಎಸ್ಎನ್ ನಿರ್ದೇಶಕ ವಿಶ್ವನಾಥ ಮಾಲಿಪಾಟೀಲ್ ಒತ್ತಾಯಿಸಿದ್ದಾರೆ.
ಕೊರೋನಾ ಸೋಂಕಿನ ಸಂಕಷ್ಟದಲ್ಲಿಯೂ ಮಾರುಕಟ್ಟೆಯಲ್ಲಿ ಭತ್ತದ ಬೆಳೆಗೆ ಸೂಕ್ತ ಬೆಲೆ ಸಿಗುವ ಬಗ್ಗೆ ರೈತರಲ್ಲಿ ಆತಂಕ ಸೃಷ್ಟಿಯಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಭತ್ತದ ಬೆಳೆಗಳಿಗೆ ನಾನಾ ರೋಗಗಳು ಬರುತ್ತಿವೆ.
ಇದರಿಂದ ಈಗಾಗಲೇ ಅರ್ಧದಷ್ಟು ಬೆಳೆ ಹಾನಿಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಕೃಷಿ ಸಚಿವರು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಸ್ಪಂದಿಸಬೇಕು. ಜೊತೆಗೆ ಸಿಎಂ ತಕ್ಷಣವೇ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ವಿಶ್ವನಾಥ್ ಮಾಲಿಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭತ್ತಕ್ಕೆ ಸೂಕ್ತ ಬೆಂಬಲ ಬೆಲೆ ಘೋಷಿಸಿ
Advertisement