ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ಸೋಮೇಶ್ವರ ಭಕ್ತರ ಸೇವಾ ಟ್ರಸ್ಟ್ ಕಮಿಟಿ, ಇನ್ಫೋಸಿಸ್ ಪ್ರತಿಷ್ಠಾನ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಹಾಗೂ ಭಾರತೀಯ ವಿಧ್ಯಾಭವನ ಬೆಂಗಳೂರು ಇವರ ಸಹಕಾರದಲ್ಲಿ ಏಪ್ರಿಲ್ 19, 20 ಮತ್ತು 21ರಂದು ಪುಲಿಗೆರೆ ಉತ್ಸವ ನಡೆಯಲಿದೆ.

ದಿ.19ರಂದು ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಉದಯ ರಾಗ-1ರಲ್ಲಿ ಖ್ಯಾತ ಕಲಾವಿದ ಸರ್ಪರಾಜ್ ಖಾನ್ ಇವರಿಂದ ಸಾರಂಗಿ ವಾದನದೊಂದಿಗೆ ಕಾರ್ಯಕ್ರಮ ಆರಂಭವಾಗುವುದು. 7 ಗಂಟೆಗೆ ಖ್ಯಾತ ಹಿಂದುಸ್ಥಾನಿ ಸಂಗೀತ ಕಲಾವಿದೆ ಕುಮಟಾದ ರೇಷ್ಮಾಭಟ್ ಅವರಿಂದ ಹಿಂದೂಸ್ಥಾನಿ ಗಾಯನ ಜರುಗುವುದು.
ಸಂಜೆ 4 ಗಂಟೆಗೆ ವಿವಿಧ ವಾದ್ಯ ವೈಭವ, ಭಕ್ತರ ಸಮ್ಮಿಲನದೊಂದಿಗೆ ಅಲಂಕೃತ ಶ್ರೀ ಸೋಮೇಶ್ವರ ದೇವರ ಪಲ್ಲಕ್ಕಿ ಉತ್ಸವ ಜರುಗಲಿದೆ. ಸಂಜೆ 6 ಗಂಟೆಗೆ ಸಿದ್ದಾಪುರದ ಕೊಳಗಿ ಕೇಶವ ಹೆಗಡೆ ಮತ್ತು ತಂಡದವರಿಂದ ಯಕ್ಷಗಾನ ಜರುಗಲಿದೆ. ಸಂಜೆ 7 ಗಂಟೆಗೆ ಹಿರಿಯ ಸಂಗೀತ ಕಲಾವಿದ ಗಾಯಕ ಡಾ.ಅಶೋಕ ಹುಗ್ಗಣ್ಣವರ ಅವರಿಂದ ಹಿಂದೂಸ್ಥಾನಿ ಗಾಯನ ನಡೆಯಲಿದೆ. ಬಳಿಕ 8.30ಕ್ಕೆ ಬೆಂಗಳೂರಿನ ವಿ.ಕಾವ್ಯಾ ಕಾಶಿನಾಥನ್ ಮತ್ತು ಶಶಾಂಕ್ ಕಿರೋಣ ನಾಯರ್ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಲಿದೆ ಎಂದು ವಿದ್ಯಾಭವನದ ಜಂಟಿ ನಿರ್ದೇಶಕಿ ನಾಗಲಕ್ಷ್ಮಿ ಕೆ.ರಾವ್ ತಿಳಿಸಿದ್ದಾರೆ.



