HomeDharwad29 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ : ಜಿಲ್ಲಾಧಿಕಾರಿ ದಿವ್ಯ ಪ್ರಭು

29 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ : ಜಿಲ್ಲಾಧಿಕಾರಿ ದಿವ್ಯ ಪ್ರಭು

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಧಾರವಾಡ : ಧಾರವಾಡ ಲೋಕಸಭಾ ಮತಕ್ಷೇತ್ರಕ್ಕೆ ಏ.12ರಿಂದ ಏ.19ರವರೆಗೆ ರಜಾ ದಿನಗಳನ್ನು ಹೊರತುಪಡಿಸಿ, ಆರು ದಿನಗಳಲ್ಲಿ ಒಟ್ಟು 29 ಜನ ಅಭ್ಯರ್ಥಿಗಳಿಂದ 44 ನಾಮಪತ್ರಗಳು ಸಲ್ಲಿಕೆ ಆಗಿವೆ ಎಂದು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಲೋಕಸಭಾ ಮತಕ್ಷೇತ್ರಕ್ಕೆ ಏ.12ರ ಮೊದಲ ದಿನ ಒಬ್ಬ ಅಭ್ಯರ್ಥಿಯಿಂದ ಒಂದು ನಾಮಪತ್ರ, ಏ.15ರ 2ನೇ ದಿನ ಐದು ಜನ ಅಭ್ಯರ್ಥಿಗಳಿಂದ 11 ನಾಮಪತ್ರಗಳು, ಏ.16ರ 3ನೇ ದಿನ ನಾಲ್ಕು ಜನ ಅಭ್ಯರ್ಥಿಗಳಿಂದ 9 ನಾಮಪತ್ರಗಳು, ಏ.17ರ 4ನೇ ದಿನದಂದು ನಾಲ್ಕು ಜನ ಅಭ್ಯರ್ಥಿಗಳಿಂದ ಐದು ನಾಮಪತ್ರಗಳು, ಏ.18ರ 5ನೇ ದಿನದಂದು ನಾಲ್ಕು ಜನ ಅಭ್ಯರ್ಥಿಗಳಿಂದ ಆರು ನಾಮಪತ್ರಗಳು ಮತ್ತು ಏ.19ರ 6ನೇ ದಿನವಾದ ಶುಕ್ರವಾರ ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, 11 ಜನ ಅಭ್ಯರ್ಥಿಗಳಿಂದ 12 ನಾಮಪತ್ರಗಳು ಸಲ್ಲಿಕೆ ಆಗಿವೆ ಎಂದು ಅವರು ತಿಳಿಸಿದ್ದಾರೆ.

ಏ.20ರಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರಗಳ ಪರಿಶೀಲನೆ ಕಾರ್ಯ ಜರುಗಲಿದೆ ಎಂದು ಚುನಾವಣಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img