ಸಮಾಜದ ಉನ್ನತಿಗೆ ವಚನ ಸಾಹಿತ್ಯ ಮುಖ್ಯ:ತೋಂಟದ ಶ್ರೀಗಳು

0
shivanubhava
Spread the love

ವಿಜಯಸಾಕ್ಷಿ ಸುದ್ದಿ, ಗದಗ : 12ನೇ ಶತಮಾನದ ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು ಅಡಗಿವೆ. ಸಮಾಜದ ಉನ್ನತಿಗೆ, ಮಾನವನ ಬದುಕಿಗೆ ವಚನಸಾಹಿತ್ಯ ಮುಖ್ಯ ಎಂದು ಪೂಜ್ಯ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ನುಡಿದರು.

Advertisement

ಲಿಂಗಾಯತ ಪ್ರಗತಿಶೀಲ ಸಂಘದ 2689ನೇ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಪೂಜ್ಯ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಮಾತನಾಡಿ, ಮಕ್ಕಳಲ್ಲಿ ಒಳ್ಳೆಯ ಸಂಸ್ಕಾರ ಬೆಳೆಯಬೇಕಾದರೆ ವಚನಗಳನ್ನು ಕಲಿಸುವುದು ಅನಿವಾರ್ಯ. ಬದುಕಿಗೆ ಬೆಳಕನ್ನು ಮತ್ತು ಆದರ್ಶಗಳನ್ನು ಕಲಿಸಿಕೊಡುವ ಕೆಲಸವನ್ನು ವಚನಗಳು ಮಾಡುತ್ತವೆ. ಮನುಷ್ಯ ಎಷ್ಟೇ ಎತ್ತರಕ್ಕೆ ಬೆಳೆದರೂ ವಿದ್ಯೆ, ವಿನಯ, ಶಿಸ್ತು, ಸೌಜನ್ಯ ರೂಢಿಸಿಕೊಳ್ಳಬೇಕು ಎಂದರು.

ಅಕ್ಕಮಹಾದೇವಿ ಮಹಿಳಾ ವಿ.ವಿ. ವಿಜಯಪುರದ ವಿಶ್ರಾಂತ ಉಪಕುಲಪತಿ ಪ್ರೊ. ವಿ.ಬಿ. ಮಾಗನೂರ ಉಪನ್ಯಾಸ ನೀಡಿ, ಶಿಕ್ಷಣದಿಂದ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಮೌಢ್ಯತೆಗಳನ್ನು ಹೋಗಲಾಡಿಸಲು ಶಿಕ್ಷಣ ಬಹಳ ಮುಖ್ಯವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿಗಳು. ಬುದ್ಧ-ಬಸವ-ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಂಗಮೇಶ್ವರ ದೇವರು ಮಾತನಾಡಿ, ಆಧ್ಯಾತ್ಮ ಎಂದರೆ ಪರಮಸತ್ಯವನ್ನು ಅರಿಯುವುದು. ಜಗತ್ತಿನಲ್ಲಿ ಬಾಳಿ ಬೆಳಗಿದ ಸಂತರು, ಶರಣರು, ಜ್ಞಾನಿಗಳು, ದಾಸರು, ದಾರ್ಶನಿಕರು ಜೀವನದುದ್ದಕ್ಕೂ ಒಳ್ಳೆಯದನ್ನು ಕೇಳಿದರು, ಒಳ್ಳೆಯದನ್ನು ನೋಡಿದರು, ಒಳ್ಳೆಯ ಕಾರ್ಯಗಳನ್ನು ಮಾಡಿದರು. ಮನಸ್ಸಿನ ತುಂಬೆಲ್ಲಾ ಒಳ್ಳೆಯ ಆಲೋಚನೆಗಳನ್ನು ತುಂಬಿಕೊAಡು ಬಹಳ ದೊಡ್ಡವರಾದರು, ಶ್ರೇಷ್ಠರಾದರು. ಸತ್ಯ-ಅಸತ್ಯ, ಧರ್ಮ-ಅಧರ್ಮ ಇವೆಲ್ಲವುಗಳನ್ನು ಪರಾಮರ್ಶಿಸಿ ಬದುಕಿದ್ದಾರೆ ಎಂದು ಹೇಳಿದರು.

ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಡಾ. ರೇಣುಕಾ ವೀರಪ್ಪ ತಾಳಿ ಅವರನ್ನು ಸಂಮಾನಿಸಲಾಯಿತು.

ಸರ್ವರನ್ನು ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಕಳಸಾಪೂರ ಸ್ವಾಗತಿಸಿದರು. ರತ್ನಕ್ಕ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಬಾಲಚಂದ್ರ ಭರಮಗೌಡರ, ರೇಣುಕಾ ವಿ.ಕರೇಗೌಡ್ರ, ಕಾರ್ಯದರ್ಶಿ ಮಹೇಶ ಗಾಣಿಗೇರ, ಸಹಕಾರ್ಯದರ್ಶಿ ವಿಜಯಕುಮಾರ ಹಿರೇಮಠ, ವಿರುಪಾಕ್ಷಪ್ಪ ಅರಳಿ, ಸಂಘಟನಾ ಕಾರ್ಯದರ್ಶಿ ಅಶೋಕ ಹಾದಿ, ಕೋಶಾಧ್ಯಕ್ಷ ಸುರೇಶ ನಿಲೂಗಲ್, ಶಿವಾನುಭವ ಸಮಿತಿ ಚೇರಮನ್ ವಿವೇಕಾನಂದಗೌಡ ಪಾಟೀಲ ಉಪಸ್ಥಿತರಿದ್ದರು.

ಮೃತ್ಯುಂಜಯ ಹಿರೇಮಠ, ಗುರುನಾಥ ಸುತಾರ ಸಂಗಡಿಗರು ವಚನಸಂಗೀತ ಹಾಡಿದರು. ಧರ್ಮಗ್ರಂಥ ಪಠಣವನ್ನು ಕೋಮಲ ಅನಿಲಗೌಡ ಅಳಗುಂಡಿ, ವಚನ ಚಿಂತನೆಯನ್ನು ಅಮೃತಾ ಯಲ್ಲನಗೌಡ ಅಳಗುಂಡಿ ಮಾಡಿದರು. ಶಿವಾನುಭವದ ದಾಸೋಹ ಭಕ್ತಿಸೇವೆಯನ್ನು ವಹಿಸಕೊಂಡಿದ್ದ ಕೆವಿಎಸ್‌ಆರ್ ಕಾಲೇಜಿನ ವಿಶ್ರಾಂತ ಉಪನ್ಯಾಸಕ ಪ್ರೊ. ವೀರಪ್ಪ ಬಸಪ್ಪ ತಾಳಿ, ತೋಂಟದಾರ್ಯ ಜಾತ್ರಾ ಮಹೋತ್ಸವ ಸಮಿತಿ-೨೦೨೪ರ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಪೂಜ್ಯರು ಸಂಮಾನಿಸಿದರು.


Spread the love

LEAVE A REPLY

Please enter your comment!
Please enter your name here