HomeEducationಸಾಧನೆ ಮಾಡಿದ ಪ್ರತಿಭಾವಂತ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಸಾಧನೆ ಮಾಡಿದ ಪ್ರತಿಭಾವಂತ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಇತ್ತೀಚೆಗೆ ಪ್ರಕಟವಾದ ಪದವಿಪೂರ್ವ ದ್ವಿತೀಯ ವಾರ್ಷಿಕ ಪರೀಕ್ಷೆಯಲ್ಲಿ ಇಲ್ಲಿನ ಸನ್ಮಾರ್ಗ ಮಹಾವಿದ್ಯಾಲಯದ ವಿಜ್ಞಾನ ವಿಭಾಗದಲ್ಲಿ ಅಮೋಘ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳ ಮನೆಮನೆಗೆ ತೆರಳಿ, ಸನ್ಮಾರ್ಗ ಪ.ಪೂ ಮಹಾವಿದ್ಯಾಲಯದ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು ಹೃತ್ಪೂರ್ವಕವಾಗಿ ಸನ್ಮಾನಿಸಿದರು.

ಸನ್ಮಾರ್ಗ ಪದವಿಪೂರ್ವ ಮಹಾವಿದ್ಯಾಲಯದ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಅಕ್ಷತಾ ಅಂಗಡಿ, ದ್ವಿತೀಯ ಸ್ಥಾನ ಪಡೆದ ಲಕ್ಷ್ಮಿನರಸಿಂಹ ಹಲಗಿ ಹಾಗೂ ತೃತೀಯ ಸ್ಥಾನ ಪಡೆದ ಕಾರ್ತಿಕ ಮಠಪತಿ ಇವರೆಲ್ಲರ ಮನೆಗಳಿಗೆ ತೆರಳಿ ಸನ್ಮಾನಿಸಿ ಅಭಿನಂದಿಸಿದರು.

ಸನ್ಮಾರ್ಗ ಪ.ಪೂ ವಿದ್ಯಾಲಯಕ್ಕೆ ಕೀರ್ತಿ ತಂದುಕೊಟ್ಟ ಈ ಮೂವರು ವಿದ್ಯಾರ್ಥಿಗಳ ಸಾಧನೆಯನ್ನು ಮಹಾವಿದ್ಯಾಲಯದ ಚೇರಮನ್ ರಾಜೇಶ ಕುಲಕರ್ಣಿ, ನಿರ್ದೇಶಕರಾದ ಪ್ರೊ. ರೋಹಿತ ಒಡೆಯರ, ಪ್ರೊ. ರಾಹುಲ್ ಒಡೆಯರ, ಪ್ರೊ. ಉಡುಪಿ ದೇಶಪಾಂಡೆ, ಪ್ರೊ. ಸೈಯದ್ ಮತಿನ್ ಮುಲ್ಲಾ, ಪ್ರಾಚಾರ್ಯ ಪ್ರೊ. ಪ್ರೇಮಾನಂದ ರೋಣದ, ಆಡಳಿತಾಧಿಕಾರಿ ಎಂ.ಸಿ. ಹಿರೇಮಠ, ಉಪನ್ಯಾಸಕರು, ಸಿಬ್ಬಂದಿಗಳು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img