ವಿಜೃಂಭಣೆಯ ಕಾಲಕಾಲೇಶ್ವರ ರಥೋತ್ಸವ

0
jatre
Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಸಮೀಪದ ಸುಕ್ಷೇತ್ರ ಕಾಲಕಾಲೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಮಂಗಳವಾರ ಸಂಜೆ ಸಕಲ ವ್ಯಾದ ವೈಭವಗಳೊಂದಿಗೆ, ಅಸಂಖ್ಯಾತ ಸದ್ಭಕ್ತರ ಮಧ್ಯೆ ರಥೋತ್ಸವವು ವಿಜೃಂಭಣೆಯಿಂದ ಜರುಗಿತು.

Advertisement

ದವನದ ಹುಣ್ಣಿಮೆ ದಿನದಂದು ವಿಶೇಷ ಪೂಜೆಯೊಂದಿಗೆ ಉತ್ಸವ ಮೂರ್ತಿಗೆ ದವನಾರ್ಪಣೆ, ತೆಂಗಿನ ಕಾಯಿ, ಉತ್ತತ್ತಿ, ಬಾಳೆಹಣ್ಣು, ಕಬ್ಬು ದವಸ-ಧಾನ್ಯ ಸಮರ್ಪಿಸಿದ ನಂತರ ಪಲ್ಲಕ್ಕಿ ಸೇವೆ ಹಾಗೂ ದುರ್ಗಾದೇವಿಯ ವಿಶೇಷ ಪೂಜೆಯೊಂದಿಗೆ ರಥದಲ್ಲಿ ಸ್ವಾಮಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ, ನಕ್ಷತ್ರ ದರ್ಶನದೊಂದಿಗೆ ಮಹಾರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಕಾಲಕಾಲೇಶ್ವರ ರಥೋತ್ಸವ ಹಿನ್ನೆಲೆಯಲ್ಲಿ ಬೆಳಿಗ್ಗೆ ಹಾಗೂ ಮಧ್ಯಾಹ್ನದ ಸುಡು ಬಿಸಿಲನ್ನೂ ಲೆಕ್ಕಿಸಿದೆ ಪಾದಾಯಾತ್ರೆ ಮೂಲಕ ಆಗಮಿಸುತ್ತಿದ್ದ ಭಕ್ತರಿಗೆ ರಸ್ತೆ ಪಕ್ಕದ ಕೆಲ ಹೊಲದ ಮಾಲಿಕರು ಹಾಗೂ ಪಟ್ಟಣದ ವಿವಿಧ ಸಂಘ-ಸಂಸ್ಥೆಗಳಿಂದ ಆರಂಭಿಸಿದ್ದ ನೀರಿನ ಅರವಟಿಗೆಗಳು ಭಕ್ತರ ನೀರಿನ ದಾಹವನ್ನು ನೀಗಿಸಿದ್ದು ವಿಶೇಷವಾಗಿತ್ತು.

ರಾಜ್ಯದ ವಿವಿಧ ಭಾಗಗಳಿಂದ ಹರಿದು ಬಂದ ಭಕ್ತರು ಎತ್ತಿನ ಚಕ್ಕಡಿ, ಟಂಟಂ, ಲಾರಿ ಇತ್ಯಾದಿ ವಾಹನಗಳ ಮೂಲಕ ಆಗಮಿಸಿ, ಕಾಲಕಾಲೇಶ್ವರನ ದರ್ಶನ ಪಡೆದರು.


Spread the love

LEAVE A REPLY

Please enter your comment!
Please enter your name here