ಮತದಾನ ಜಾಗೃತಿಗಾಗಿ ಕಾಲ್ನಡಿಗೆ ಜಾಥಾ

0
sveep
Spread the love

ವಿಜಯಸಾಕ್ಷಿ ಸುದ್ದಿ, ಮುಂಡರಗಿ : ತಾಲೂಕಾ ಸ್ವೀಪ್ ಸಮಿತಿ ವತಿಯಿಂದ ತಾಲೂಕಾ ಸ್ವೀಪ್ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ `ನಮ್ಮ ನಡೆ-ಮತಗಟ್ಟೆ ಕಡೆ’ ಕಾರ್ಯಕ್ರಮದಡಿ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು.

Advertisement

ಜಾಥಾಗೆ ತಹಸೀಲ್ದಾರ ಧನಂಜಯ ಮಾಲಗತ್ತಿ ಅವರ ಜೊತೆ ಜಂಟಿಯಾಗಿ ಚಾಲನೆ ನೀಡಿ ಮಾತನಾಡಿದ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲೂಕಾ ಸ್ವೀಪ್ ಸಮಿತಿ ಅಧ್ಯಕ್ಷ ವಿಶ್ವನಾಥ ಹೊಸಮನಿ, ಕಳೆದ ಚುನಾವಣೆಯಲ್ಲಿ ಪಟ್ಟಣದ ಕೋಟೆಭಾಗದ 43, 44, 45, 46, 47ನೇ ಮತಗಟ್ಟೆಗಳಲ್ಲಿ ಕಡಿಮೆ ಮತದಾನವಾಗಿದೆ. ಮೇ 7ರಂದು ನಡೆಯುವ ಲೋಕಸಭೆ ಚುನಾವಣೆಗೆ ಒಟ್ಟಾರೆ ನೂರಕ್ಕೆ ನೂರರಷ್ಟು ಮತದಾನವಾಗಬೇಕು ಎಂದರು.

ಕೋಟೆಭಾಗದ ಸ.ಹಿ.ಪ್ರಾ ಶಾಲೆಯಲ್ಲಿ ಚುನಾವಣಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ತಹಸೀಲ್ದಾರ ಧನಂಜಯ ಮಾಲಗತ್ತಿ, ಮತದಾನ ಪ್ರಮಾಣದ ಹೆಚ್ಚಳಕ್ಕೆ ಈ ಸಾರಿ ಮುಂಡರಗಿ ಪಟ್ಟಣದ ಎಲ್ಲ ಮತಗಟ್ಟೆ ಹಾಗೂ ಕಡಿಮೆ ಮತದಾನವಾದ ತಾಲೂಕಿನ ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.

ಇದೇ ವೇಳೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಪುರಸಭೆ ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ, ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ತಾ.ಪಂ ಸಿಬ್ಬಂದಿಗಳು ಸೇರಿದಂತೆ ವಿವಿಧ ಸರಕಾರಿ ನೌಕರ ಸಂಘಟನೆಯ ಪದಾಧಿಕಾರಿಗಳು ಇದ್ದರು.


Spread the love

LEAVE A REPLY

Please enter your comment!
Please enter your name here