HomeUncategorizedಲಕ್ಕುಂಡಿಯಲ್ಲಿ ಮತದಾನ ಜಾಗೃತಿ ಜಾಥಾ

ಲಕ್ಕುಂಡಿಯಲ್ಲಿ ಮತದಾನ ಜಾಗೃತಿ ಜಾಥಾ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಇಲ್ಲಿಯ ಗ್ರಾಮ ಪಂಚಾಯಿತಿ ಸ್ವೀಪ್ ಸಮಿತಿಯು ಲೋಕಸಭಾ ಚುನಾವಣೆಯ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಆಶ್ರಯದಲ್ಲಿ ನಡೆದ ಮತದಾನ ಜಾಗೃತಿ ಜಾಥಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಗ್ರಾಮ ಪಂಚಾಯಿತಿ ಅಧಿಕಾರಿಗಳು, ಶಿಕ್ಷಕರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಜಾಥಾದಲ್ಲಿ ಪಾಲ್ಗೊಂಡು ಜಾಗೃತಿ ಮೂಡಿಸಿದರು.

ಪ್ರಮುಖ ಸ್ಥಳದಲ್ಲಿ ನೆರೆದಿದ್ದ ಮತದಾರರಿಗೆ ಮತದಾನ ಮಾಡುವ ಬಗ್ಗೆ ತಿಳುವಳಿಕೆ ನೀಡಿದರು. ಇದಕ್ಕೂ ಪೂರ್ವ ಗ್ರಾ.ಪಂ ಎದುರು ಸ್ವಿಪ್ ಧ್ವಜಾರೋಹಣವನ್ನು ಶಿಕ್ಷಕಿ ಅಂಜನಾ ಕರಿಯಲ್ಲಪ್ಪನವರ ನೆರವೇರಿಸಿದರು.

ನಂತರ ಪ್ರತಿಜ್ಞಾ ವಿಧಿ ಭೋಧಿಸಲಾಯಿತು. ಅಭಿವೃದ್ಧಿ ಅಧಿಕಾರಿ ರಾಜಕುಮಾರ ಭಜಂತ್ರಿ, ಕಾರ್ಯದರ್ಶಿ ತುಕಾರಾಮ ಹುಲಗಣ್ಣವರ, ಗ್ರಂಥಾಲಯ ಮೇಲ್ವಿಚಾರಕ ಅಶೋಕ ಮುಸ್ಕಿನಭಾವಿ, ಪ್ರಾಥಮಿಕ ಶಾಲೆಯ ಶಿಕ್ಷಕರು ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img