ವಿಜಯಸಾಕ್ಷಿ ಸುದ್ದಿ, ಗದಗ : ಭಾರತೀಯ ಜನತಾ ಪಾರ್ಟಿ ಹಾವೇರಿ-ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಚುನಾವಣಾ ಕಾರ್ಯ ಚಟುವಟಿಕೆಯಲ್ಲಿ ತೊಡಗಿ ಮನೆ, ಮನೆ ಸಂಪರ್ಕ ಮಾಡಿ, ಕೇಂದ್ರ ಸರ್ಕಾರದ ಹತ್ತಾರು ಯೋಜನೆಗಳು ಹಾಗೂ ಜನಪರ ಕಾಳಜಿಗಳ ಬಗ್ಗೆ ಮತದಾರರಿಗೆ ತಿಳಿಸಿ, ಪಕ್ಷದ ಬಲವರ್ಧನೆಗೆ ಶ್ರಮಿಸಿದ ಎಲ್ಲ ಮುಖಂಡರು, ಕಾರ್ಯಕರ್ತರು, ಹಿತೈಷಿಗಳು, ಅಭಿಮಾನಿಗಳು ಹಾಗೂ ಜಿಲ್ಲೆಯ ಎಲ್ಲ ಪದಾಧಿಕಾರಿಗಳಿಗೆ ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ ಪತ್ರಿಕಾ ಪ್ರಕಟಣೆಯ ಮೂಲಕ ಕೃತಜ್ಞತೆ ತಿಳಿಸಿದ್ದಾರೆ.
Advertisement