ಬಸವ ಜಯಂತಿ ಮೆರವಣಿಗೆ ಇಂದು

0
basava
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು, ಲಿಂಗಾಯತ ಧರ್ಮ ಸಂಸ್ಥಾಪಕ ಬಸವಣ್ಣನವರ 919ನೇ ಜಯಂತಿ ಅಂಗವಾಗಿ ಮೇ. 10ರಂದು ಮುಂಜಾನೆ 9 ಗಂಟೆಗೆ ಪೂಜ್ಯ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

Advertisement

ಮೆರವಣಿಗೆಯು ಶ್ರೀಮಠದಿಂದ ಪ್ರಾರಂಭವಾಗಿ ಮಹೇಂದ್ರಕರ ವೃತ್ತ, ಹುಯಿಲಗೋಳ ವೃತ್ತ, ಬಸವೇಶ್ವರ ವೃತ್ತ, ಕೆ.ಎಚ್. ಪಾಟೀಲ ವೃತ್ತ, ಮಾಳಶೆಟ್ಟಿ ವೃತ್ತ, ರೋಟರಿ ವೃತ್ತ, ಮಹಾತ್ಮಾ ಗಾಂಧಿ ವೃತ್ತದ ಮೂಲಕ ತೋಂಟದಾರ್ಯ ಮಠಕ್ಕೆ ತಲುಪುವುದು.

ಮೆರವಣಿಗೆಯಲ್ಲಿ ಬಸವದಳ-ಬಸವಕೇಂದ್ರ-ಲಿಂಗಾಯತ ಪ್ರಗತಿಶೀಲ ಸಂಘ, ಶ್ರೀ ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ಸಮಿತಿ-2024, ಕನ್ನಡ ಸಾಹಿತ್ಯ ಪರಿಷತ್ತು, ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಬಸವ ಯೋಗ ಕೇಂದ್ರ, ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರ, ಜಾಗತಿಕ ಲಿಂಗಾಯತ ಮಹಾಸಭೆ, ಶರಣರಾದ ಜೇಡರ ದಾಸಿಮಯ್ಯ, ಮಾದಾರ ಚನ್ನಯ್ಯ, ಡೋಹರ ಕಕ್ಕಯ್ಯ, ನೂಲಿಯ ಚಂದಯ್ಯ, ಸಮಗಾರ ಹರಳಯ್ಯ, ಮಡಿವಾಳ ಮಾಚಯ್ಯ, ಅಂಬಿಗರ ಚೌಡಯ್ಯ, ಮೇದಾರ ಕೇತಯ್ಯ, ಹೂಗಾರ ಮಾದಯ್ಯ, ಶಿವಯೋಗಿ ಸಿದ್ಧರಾಮೇಶ್ವರ, ಹಡಪದ ಅಪ್ಪಣ್ಣ, ಕುಂಬಾರ ಗುಂಡಯ್ಯ, ಕುರುಬ ಗೊಲ್ಲಾಳೇಶ, ದಲಿತ ಸಂಘರ್ಷ ಸಮಿತಿ ಹಾಗೂ ಬಸವಪರ ಸಂಘಟನೆಗಳ ಮುಖಂಡರು ಭಾಗವಹಿಸಬೇಕೆಂದು ಸಂಘಟಿಕರ ಪರವಾಗಿ ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಕಳಸಾಪೂರಶೆಟ್ರ, ಶ್ರೀ ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ಸಮಿತಿ-2024 ಅಧ್ಯಕ್ಷ ಪ್ರಾ. ಕೆ.ಎಚ್. ಬೇಲೂರ ಹಾಗೂ ಪ್ರಕಾಶ ಅಸುಂಡಿಯವರು ವಿನಂತಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here