ವಿಜಯಸಾಕ್ಷಿ ಸುದ್ದಿ, ಗದಗ : ವಿಶ್ವಗುರು ಬಸವೇಶ್ವರ ಜಯಂತಿ ಅಂಗವಾಗಿ ಶುಕ್ರವಾರ ನಗರದ ತೋಂಟದಾರ್ಯ ಮಠದಲ್ಲಿ ಬಸವೇಶ್ವರರ ಭವ್ಯ ಮೆರವಣಿಗೆಗೆ ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಚಾಲನೆ ನೀಡಿದರು. ಬಸವಪರ ಸಂಘಟನೆಗಳು ಹಾಗೂ ಬಸವಾಭಿಮಾನಿಗಳ ಸಮ್ಮುಖದಲ್ಲಿ ಮೆರವಣಿಗೆಯು ನಗರದಾದ್ಯಂತ ಸಂಚರಿಸಿತು.
ಈ ಸಂದರ್ಭದಲ್ಲಿ ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟರ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಕಳಸಾಪೂರ, ತೋಂಟದಾರ್ಯ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಕೆ.ಎಚ್. ಬೇಲೂರ, ಬಸವದಳದ ಅಧ್ಯಕ್ಷ ವಿ.ಕೆ. ಕರೇಗೌಡ್ರ, ಎಸ್.ಎನ್. ಬಳ್ಳಾರಿ, ಶ್ರೀಮಠದ ಮ್ಯಾನೇಜರ್ ಎಂ.ಎಸ್. ಅಂಗಡಿ, ಅಮರೇಶ ಅಂಗಡಿ, ಕೆ.ಎಸ್. ಪಲ್ಲೇದ, ಶೇಖಣ್ಣ ಕವಳಿಕಾಯಿ, ಪ್ರಕಾಶ ಅಸುಂಡಿ, ದಾನಯ್ಯ ಗಣಾಚಾರಿ, ಐ.ಬಿ ಬೆನಕೊಪ್ಪ, ಶ್ರೀದೇವಿ ಶೆಟ್ಟರ್, ಗೌರಕ್ಕ ಬಡಿಗಣ್ಣವರ, ವಿರುಪಣ್ಣ ಬಳ್ಳೊಳ್ಳಿ ಸೇರಿದಂತೆ ಅನೇಕ ಬಸವಪರ ಸಂಘಟನೆಗಳ ಮುಖ್ಯಸ್ಥರು ಹಾಜರಿದ್ದರು.
ಜಗದ್ಗುರು ತೋಂಟದಾರ್ಯ ಜಾತ್ರಾ ಮಹೋತ್ಸವ ಸಮಿತಿ, ಲಿಂಗಾಯತ ಪ್ರಗತಿಶೀಲ ಸಂಘ, ಬಸವದಳ-ಬಸವಕೇಂದ್ರ, ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು, ಬಸವ ಯೋಗ ಕೇಂದ್ರ, ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರ, ದಲಿತ ಸಂಘರ್ಷ ಸಮಿತಿ, ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ಬಸವಪರ ಸಂಘಟನೆಗಳ ಸದಸ್ಯರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.