ವಿಜಯಸಾಕ್ಷಿ ಸುದ್ದಿ, ಗದಗ : ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಗದಗ ಜಿಲ್ಲಾ ಸಮಿತಿ ವತಿಯಿಂದ ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರರನ್ನು ಹತ್ಯೆ ಮಾಡಿದ ಗಿರೀಶನನ್ನು ಗಲ್ಲಿಗೇರಿಸಲು ಒತ್ತಾಯಿಸಿ, ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಬಿಲಾಲ್ ಗೋಕಾವಿ, ರಾಜ್ಯದಲ್ಲಿ ಹಲವು ಪ್ರೇಮ ವೈಫಲ್ಯದಿಂದ ನಡೆದ ಹತ್ಯೆಗಳ ಬಗ್ಗೆ ವಿಷಾದ ವ್ಯಕ್ತಪಡಿಸಿ, ಪ್ರವೀಣ್ ಚೌಗಲೆ, ಫಯಾಜ್, ಗಿರೀಶ್ ಅವರಂತಹ ವಿಕೃತ ಮನಸ್ಥಿತಿಯ ಅಪರಾದಿಗಳನ್ನು ತ್ವರಿತವಾಗಿ ಫಾಸ್ಟಾçಕ್ ಕಾನೂನು ತರುವ ಮೂಲಕ ಗಲ್ಲು ಶಿಕ್ಷೆಗೆ ಒಳಪಡಿಸಿ ಹೆಣ್ಣು ಮಕ್ಕಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಪಕ್ಷದ ಪ್ರಧಾನ ಕಾರ್ಯದರ್ಶಿ ಅನ್ವರ್ ಬಾಗೇವಾಡಿ ಮಾತನಾಡಿ, ರಾಜ್ಯದಲ್ಲಿ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದ್ದರೂ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ಕಾರ್ಯಪ್ರವೃತ್ತವಾಗಿ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಶಾಲಾ-ಕಾಲೇಜು ಕ್ಯಾಂಪಸ್‌ಗಳಲ್ಲಿ ತಿಂಗಳಿಗೊಮ್ಮೆ ಸೌಜನ್ಯ ಭೇಟಿ ನೀಡಿ, ವಿದ್ಯಾರ್ಥಿಗಳ ಅಹವಾಲು ಸ್ವೀಕರಿಸಿ, ಇಂತಹ ಘಟನೆಗಳಿಗೆ ಆಸ್ಪದ ಸಿಗದ ಹಾಗೆ ಕಟ್ಟೆಚರ ವಹಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು, ಉಪಾಧ್ಯಕ್ಷ ಹಿದಾಯತುಲ್ ಕಾಗದಗಾರ, ಕಾರ್ಯದರ್ಶಿ ಇರ್ಫಾನ್ ಗುಲಗುಂದಿ, ಮುಸ್ತಾಕ್ ಕಟ್ಟಿಮನಿ, ವಾಸಿಮ್ ರಬಕವಿ, ಮುಜಹಿದ್ ಕಣಕೇನ್ನವರ, ಯಾಸೀನ್ ಹುಬ್ಬಳಿ, ನವೀದ್ ಕಮನ್ಗಾರ, ಮುಸ್ತಾಕ್ ಹೊಸಮನಿ, ಜುನೆದ ಢಾಲಾಯತ ಮುಂತಾದವರು ಉಪಸ್ಥಿತರಿದ್ದರು.