Homecultureರಂಭಾಪುರಿ ಶ್ರೀಗಳ ಜೂನ್ ಮಾಹೆಯ ಪ್ರವಾಸ

ರಂಭಾಪುರಿ ಶ್ರೀಗಳ ಜೂನ್ ಮಾಹೆಯ ಪ್ರವಾಸ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು : ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ ಜೂನ್ ಮಾಹೆಯ ಪ್ರವಾಸ ಕಾರ್ಯಕ್ರಮ ಈ ಕೆಳಗಿನಂತಿದೆ.

ಜೂನ್ 7ರಂದು ಹಾಸನ ಜಿಲ್ಲೆ ಆಲೂರಿನಲ್ಲಿ ಪುರ ಪ್ರವೇಶ-ಧರ್ಮ ಸಮಾರಂಭ, 9ರಂದು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕ ಸಿದ್ಧರಬೆಟ್ಟ ಕ್ಷೇತ್ರದಲ್ಲಿ ಶ್ರೀ ವೀರಭದ್ರ ಶಿವಾಚಾರ್ಯರ ಪಟ್ಟಾಧಿಕಾರ ವರ್ಧಂತಿ ಮಹೋತ್ಸವ, 12ರಂದು ಚಿಕ್ಕಮಗಳೂರಿನಲ್ಲಿ ಶ್ರೀ ಜಗದ್ಗುರು ರೇಣುಕ-ಶ್ರೀ ಬಸವ ಜಯಂತಿ ಸಮಾರಂಭ, 13ರಂದು ಅಜ್ಜಂಪುರ ತಾಲೂಕ ಹಣ್ಣೆ ಮಠದಲ್ಲಿ ಲಿಂ.ಶಿವಾನಂದ ಶ್ರೀಗಳ ಪುಣ್ಯ ಸ್ಮರಣೆ ಹಾಗೂ ಮರುಳಸಿದ್ಧ ಪಂಡಿತಾರಾಧ್ಯರ ೫ನೇ ವರ್ಧಂತಿ ಧರ್ಮ ಸಮಾರಂಭ, 14ರಂದು ಶಿವಮೊಗ್ಗದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸುವರು.

ಜೂನ್ 16ರಂದು ದಾವಣಗೆರೆಯಲ್ಲಿ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಸಮಾರಂಭ, 17ರಂದು ಬೆಂಗಳೂರಿನಲ್ಲಿ ಇಷ್ಟಲಿಂಗ ಮಹಾಪೂಜಾ, 18ರಂದು ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಧರ್ಮ ಸಮಾರಂಭ, 19ರಂದು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕ ತಾವರಗೆರೆಯಲ್ಲಿ ವೀರೇಶ ಪಾಟೀಲರ ವೈವಾಹಿಕ ಜೀವನದ ರಜತ ಮಹೋತ್ಸವದಲ್ಲಿ ಪಾಲ್ಗೊಳ್ಳುವರು. 21ರಂದು ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಪೌರ್ಣಿಮೆಯ ನಿಮಿತ್ಯ ವಾಸ್ತವ್ಯವಿದ್ದು ಭಕ್ತಾದಿಗಳಿಗೆ ದರ್ಶನಾಶೀರ್ವಾದ ನೀಡುವರು.

ಜೂ. 27ರಿಂದ 29ರವರೆಗೆ ಕಲಬುರ್ಗಿ ಜಿಲ್ಲೆ ಚಿಂಚೋಳಿಯಲ್ಲಿ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಜಾಗೃತಿ ಸಮಾರಂಭ, 30ರಂದು ಕಲಬುರ್ಗಿಯಲ್ಲಿ ಡಾ. ಸಿದ್ಧಲಿಂಗಯ್ಯ ಹನಗೋಡಿಮಠ ಅವರ ಷಷ್ಠ್ಯಬ್ಧಿ ಸಮಾರಂಭದ ಸಾನ್ನಿಧ್ಯ ವಹಿಸುವರು. ಶ್ರೀ ರಂಭಾಪುರಿ ಜಗದ್ಗುರುಗಳವರ ಧಾರ್ಮಿಕ ಕಾರ್ಯಕ್ರಮಗಳ ಲಾಭವನ್ನು ಸಮಸ್ತರು ಪಡೆದುಕೊಳ್ಳುವಂತೆ ಶ್ರೀ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್. ಬಾಳನಗೌಡ್ರ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!