HomeGadag Newsಮಾನಸಿಕ ಆರೋಗ್ಯ ಕಾಯ್ದುಕೊಳ್ಳಿ : ಸಿ.ಎಸ್. ಶಿವನಗೌಡ್ರ

ಮಾನಸಿಕ ಆರೋಗ್ಯ ಕಾಯ್ದುಕೊಳ್ಳಿ : ಸಿ.ಎಸ್. ಶಿವನಗೌಡ್ರ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಪ್ರತಿಯೊಬ್ಬರಿಗೂ ಮಾನಸಿಕ ಆರೊಗ್ಯ ಅತ್ಯವಶ್ಯವಾಗಿದ್ದು, ವಿದ್ಯಾರ್ಥಿಗಳು ವಿದ್ಯಾಬ್ಯಾಸದ ಜೊತೆಗೆ ಮಾನಸಿಕ ಆರೋಗ್ಯ ಕಾಯ್ದುಕೊಳ್ಳಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧಿಶರಾದ ಸಿ.ಎಸ್. ಶಿವನಗೌಡ್ರ ಹೇಳಿದರು.

ನಗರದ ತೊಂಟದಾರ್ಯ ತಾಂತ್ರಿಕ ಮಹಾವಿದ್ಯಾಲಯಲ್ಲಿ ಗುರುವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಾಕ್ರಮ ವಿಭಾಗ, ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕಾ ಆರೋಗ್ಯ ಇಲಾಖೆ ಹಾಗೂ ತೊಂಟದಾರ್ಯ ತಾಂತ್ರಿಕ ಮಹಾವಿದ್ಯಾಲಯ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ `ವಿಶ್ವ ಸ್ಕಿಝೋಫ್ರೀನಿಯಾ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾನಸಿಕ ಖಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಜಾಗೃತಿ ಮೂಡಿಸುವದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಹಾಗೂ ಸಮಾಜವು ಮಾನಸಿಕ ಖಾಯಿಲೆ ಇದ್ದ ವ್ಯಕ್ತಿಗೆ ಕಾಳಜಿ ವಹಿಸಿ ಚಿಕಿತ್ಸೆ ಕೊಡಿಸಲು ಮುಂದಾಗಬೇಕೆಂದು ಕರೆ ನೀಡಿದರು.

ತೊಂಟದಾರ್ಯ ತಾಂತ್ರಿಕ ಮಹಾವಿದ್ಯಾಲಯ ಪ್ರಾಂಶುಪಾಲ ಮಹೇಶ ಅವಟಿ ಮಾತನಾಡಿ, ಉಪಯುಕ್ತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಧನ್ಯವಾದವನ್ನು ತಿಳಿಸಿದರು ಹಾಗೂ ವಿದ್ಯಾರ್ಥಿಗಳಿಗೆ ಸ್ಕಿಝೋಫ್ರೀನಿಯಾ ಖಾಯಿಲೆ ಮತ್ತು ಚಿಕಿತ್ಸೆ ಕುರಿತು ಸಮಾಜದಲ್ಲಿ ಅರಿವು ಮೂಡಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ. ಆರ್.ಸಿ. ಬಸರಿಗಿಡದ ಸೇರಿದಂತೆ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಿಧಿ ಮುದಿಗೌಡ್ರ ಸ್ವಾಗತಿಸಿದರು. ಬಿ.ಮಾನ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಂಚನಾ ಪತ್ತಾರ ವಂದಸಿದರು.

ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಾನಸಿಕ ಆರೋಗ್ಯ ವಿಭಾಗ ಮುಖ್ಯಸ್ಥರಾದ ಡಾ. ಸೊಮಶೇಖರ ಬಿಜ್ಜಳ ಮಾತನಾಡಿ, ಮಾನಸಿಕ ಅಸ್ವಸ್ಥರಿಗೆ ಸಮಾಜದ ಕಾಳಜಿ ಅತ್ಯವಶ್ಯವಾಗಿದೆ. ಭಾರತ ಸರ್ಕಾರವು ಪ್ರಾರಂಭಿಸಿರುವ ಟೆಲಿ-ಮನಸ್ ಉಚಿತ ಸಹಾಯವಾಣಿ ಸಂಖ್ಯೆ 14416ಗೆ ಕರೆ ಮಾಡಿ ಆಪ್ತ ಸಮಾಲೋಚನೆ ಸೇವೆ ಪಡೆಯಬಹುದು ಎಂದು ತಿಳಿಸಿದರಲ್ಲದೆ, ಪರೀಕ್ಷಾ ತಯಾರಿ ಮತ್ತು ಕೌಶಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img