HomeGadag Newsಹೊಸ ಅಪರಾಧಿಕ ಕಾನೂನುಗಳ ಅರಿವು ಅಗತ್ಯ : ಬಿ.ಎಸ್. ನೇಮಗೌಡ

ಹೊಸ ಅಪರಾಧಿಕ ಕಾನೂನುಗಳ ಅರಿವು ಅಗತ್ಯ : ಬಿ.ಎಸ್. ನೇಮಗೌಡ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಜನ ಸಾಮಾನ್ಯರಿಗೆ ಸೂಕ್ತ ರಕ್ಷಣೆಯನ್ನು ಸುಲಭವಾಗಿ ಒದಗಿಸುವ ಉದ್ದೇಶದಿಂದ ಹಲವು ಮಾರ್ಪಾಡುಗಳೊಂದಿಗೆ ಹೊಸದಾಗಿ ಜಾರಿಗೆ ತರಲಾಗುತ್ತಿರುವ ಅಪರಾಧಿಕ ಕಾಯಿದೆಗಳನ್ನು ಸಂಪೂರ್ಣವಾಗಿ ಅರಿತುಕೊಳ್ಳುವುದು ಅತ್ಯವಶ್ಯಕವಾಗಿದೆ. ಅಲ್ಲದೆ, ಇದು ಎಲ್ಲರ ಜವಾಬ್ದಾರಿಯೂ ಆಗಿದೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಹೇಳಿದರು.

ಶಹರದ ಕೆಎಲ್‌ಇ ಸಂಸ್ಥೆಯ ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯ ಮತ್ತು ಗದಗ ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಗುರುವಾರ ಜೆ.ಟಿ. ಕಾಲೇಜಿನ ಸಭಾಂಗಣದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಹಮ್ಮಿಕೊಂಡಿದ್ದ ಹೊಸ ಅಪರಾಧಿಕ ಕಾನೂನುಗಳ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರಿನ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯವಾದಿ ಆರ್.ಎಂ. ಮಲ್ಲಿಕಾರ್ಜುನ ಮಾತನಾಡಿ, ಭಾರತೀಯ ಸುರಕ್ಷಾ ಸಂಹಿತೆಯಲ್ಲಿನ ಬದಲಾವಣೆಯ ಪಕ್ಷಿನೋಟದೊಂದಿಗೆ ಬಂಧನ ಮತ್ತು ಜಾಮೀನುಗಳ ಪ್ರಕ್ರಿಯೆಗಳ ಕುರಿತಾಗಿ ಮಾಹಿತಿಯನ್ನು ನೀಡಿದರು.

ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಕದ, ಅತಿಥಿಗಳಾಗಿ ಮಹಾವಿದ್ಯಾಲಯದ ಸ್ಥಾನಿಕ ಮಂಡಳಿ ಸದಸ್ಯರಾದ ಎಸ್,ಎಫ್. ಹಾದಿಮನಿ, ಬಿ.ಎಂ. ಶೆಲ್ಲಿಕೇರಿ ವೇದಿಕೆಯ ಮೇಲೆ ಉಪಸ್ಥಿತರಿದ್ದರು.

One day workshop for police personnel

ವಿದ್ಯಾರ್ಥಿನಿ ಚೈತ್ರಾ ಗೌಡರ ಪ್ರಾರ್ಥಿಸಿದರು. ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಜೈ ಹನುಮಾನ ಹೆಚ್.ಕೆ. ಸ್ವಾಗತಿಸಿ, ಪರಿಚಯಿಸಿದರು. ಸಂಪನ್ಮೂಲ ವ್ಯಕ್ತಿಗಳ ಪರಿಚಯವನ್ನು ಸಹಾಯಕ ಪ್ರಾಧ್ಯಾಪಕ ಶರತಕುಮಾರ ದರಬಾರೆ ನಡೆಸಿಕೊಟ್ಟರು. ಸಹಾಯಕ ಪ್ರಾಧ್ಯಾಪಕ ಎಸ್.ಟಿ. ಮೂರಶಿಳ್ಳಿನ ವಂದಿಸಿದರು.

ಜೆ.ಟಿ. ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ.ಜಿ. ಪಾಟೀಲ ಸಮಾರೋಪ ಭಾಷಣ ಮಾಡಿದರು. ಸಹಾಯಕ ಪ್ರಾದ್ಯಾಪಕ ಡಾ. ಶ್ರೀನಿವಾಸ ಪಾಲಕೊಂಡ ವಂದಿಸಿದರು. ನೂರಫಾತೀಮಾ ಅಕ್ಕಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಗಾರದಲ್ಲಿ 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ಮಾಹಿತಿ ಪಡೆದುಕೊಂಡರು. ಸಹಾಯಕ ಪ್ರಾದ್ಯಾಪಕಿ ಡಾ. ಜ್ಯೋತಿ ಸಿ.ವಿ ಮತ್ತು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

ಕಾರ್ಯಾಗಾರದ ಪ್ರಥಮ ತಾಂತ್ರಿಕ ಗೋಷ್ಠಿಯಲ್ಲಿ ನ್ಯಾಯವಾದಿ ಸಿ.ಎನ್. ರಾಚಯ್ಯನವರ ಮಾತನಾಡಿ, ಭಾರತೀಯ ನ್ಯಾಯ ಸಂಹಿತೆಯಲ್ಲಿನ ಹೊಸ ಅಪರಾಧಗಳ ಕುರಿತಾಗಿ ಮಾಹಿತಿ ಒದಗಿಸಿದರು. ಮಹಾವಿದ್ಯಾಲಯದ ಸಹಾಯಕ ಪ್ರಾದ್ಯಾಪಕ ಡಾ. ವಿಜಯ ಮುರದಂಡೆ ಭಾರತೀಯ ಸಾಕ್ಷ ಅಧಿನಿಯಮದಲ್ಲಿಯ ಬದಲಾವಣೆಗಳ ಕುರಿತು ವಿವರಿಸಿದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!