ಬೊಮ್ಮಾಯಿ ಗೆಲುವಿಗೆ ಶ್ರಮಿಸಿದವರಿಗೆ ರಾಜು ಕುರುಡಗಿ ಅಭಿನಂದನೆ

0
Raju congratulated the workers who worked hard for Bommai victory
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಬಸವರಾಜ ಬೊಮ್ಮಾಯಿ ಹಾಗೂ ಪಿ.ಸಿ. ಗದ್ದಿಗೌಡ್ರ ಅವರ ಗೆಲುವಿಗೆ ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೆ, ಮತಬಾಂಧವರಿಗೆ ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

Advertisement

ಕ್ಷೇತ್ರಗಳಲ್ಲಿ ಮತಾಶೀರ್ವಾದದ ಮೂಲಕ ಬೆಂಬಲಿಸಿರುವ ಸಮಸ್ತ ಹಾವೇರಿ-ಗದಗ ಹಾಗೂ ಬಾಗಲಕೋಟೆ ಜಿಲ್ಲೆಯ ಮತದಾರರಿಗೆ ಧನ್ಯವಾದಗಳು. ವಿಶೇಷವಾಗಿ ಗದಗ ನಗರದ ಬಿಜೆಪಿಯ ಚುನಾಯಿತ ಅಭ್ಯರ್ಥಿಗಳು, ಬಿಜೆಪಿಯ ಮೋರ್ಚಾ, ಮಂಡಲ, ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಚುನಾವಣೆಯಲ್ಲಿ ಶ್ರಮ ವಹಿಸಿ ನಮ್ಮ ಅಭ್ಯರ್ಥಿಯನ್ನು ವಿಜಯಶಾಲಿಯಾಗುವುದರಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಮುಖ್ಯ ಪಾತ್ರ ವಹಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಗದಗ ನಗರದಲ್ಲಿ ಪಕ್ಷದ ಸಂಘಟನೆಗೆ ಬೆನ್ನೆಲುಬಾಗಿ ನಿಂತು ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬಿರುವ ನರಗುಂದ ಶಾಸಕ ಸಿ.ಸಿ. ಪಾಟೀಲ, ಲೋಕಸಭಾ ಸಂಚಾಲಕ ಕಳಕಪ್ಪ ಬಂಡಿ, ವಿ.ಪ. ಸದಸ್ಯ ಎಸ್.ವ್ಹಿ. ಸಂಕನೂರ, ಶಿರಹಟ್ಟಿ ಶಾಸಕ ಚಂದ್ರು ಲಮಾಣಿ, ಬಿಜೆಪಿ ಮುಖಂಡರಾದ ಅನಿಲ ಮೆಣಸಿನಕಾಯಿ ಸೇರಿದಂತೆ ಬಿಜೆಪಿಯ ಎಲ್ಲ ಮುಖಂಡರು, ಕಾರ್ಯಕರ್ತರು, ಜೆಡಿಎಸ್ ಪಕ್ಷದ ಸರ್ವ ಮುಖಂಡರು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷಗಳ ಎಲ್ಲ ಹಿರಿಯರು ಮಾರ್ಗದರ್ಶನ ಪರಿಶ್ರಮದಿಂದ ಬಿಜೆಪಿ ವಿಜಯಶಾಲಿಯಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here