ವಿಜಯಸಾಕ್ಷಿ ಸುದ್ದಿ, ಗದಗ : ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಆಶ್ರಮದಲ್ಲಿ ಬಿಜೆಪಿ ಹಿರಿಯ ಮುಖಂಡರಾದ ಅಶೋಕ ಜವಳಿ ಅವರ 58ನೇ ಜನ್ಮದಿನವನ್ನು ಅಂಧ, ಅನಾಥ, ಮಕ್ಕಳಿಗೆ ಸಿಹಿ ಹಂಚುವ ಮೂಲಕ ಆಚರಿಸಿಕೊಂಡರು.
ಈ ಸಂದರ್ಭದಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಮುರಿಗೆಪ್ಪ ಶೆಟ್ಟರ್ ಮಾತನಾಡಿ, ಜವಳಿಯವರು ರಾಜಕೀಯವಾಗಿ, ಸಾಮಾಜಿಕವಾಗಿ, ಜನರ ಸೇವೆಗೆ ಜೀವನ ಮುಡಿಪಾಗಿಟ್ಟು ಅಂಧ, ಅನಾಥ ಮಕ್ಕಳಿಗೆ ಈ ಶೈಕ್ಷಣಿಕ ವರ್ಷದಲ್ಲಿ ಪಠ್ಯೇತರ ಸಾಮಗ್ರಿಗಳನ್ನು ವಿತರಿಸುವುದಾಗಿ ಹೇಳಿರುವುದು ಸಂತಸ ತಂದಿದೆ. ಅಲ್ಲದೇ ಅಶೋಕ ಜವಳಿಯವರು ಸಮಾಜಮುಖಿಯಾಗಿ ಕೆಲಸ ಮಾಡಿ ಈ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳಿಗಾಗಿ ರಾಜ್ಯಮಟ್ಟದ ಖೋಖೋ ಪಂದ್ಯಾವಳಿ ಆಯೋಜಿಸಿದ್ದು ಗಮನಾರ್ಹ ಸಂಗತಿಯಾಗಿದೆ ಎಂದರು.
ಪೂಜ್ಯ ಕಲ್ಲಯ್ಯಜ್ಜನವರು ಶ್ರೀಮಠದಿಂದ ಅಶೋಕ ಜವಳಿಯವರನ್ನು ಸನ್ಮಾನಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಬಸನಗೌಡ ಬಿರಾದಾರ, ಮನೋಜ ಮೆಹ್ತಾ, ಮಹೇಶ ಲಕ್ಕುಂಡಿ, ಹಿರಿಯ ಮುಖಂಡರಾದ ಗಿರೀಶ ಹೊಸಕೋಟಿ ಸೇರಿದಂತೆ ಅಶೋಕ ಜವಳಿಯವರ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು.


