ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರ ಶಿಫಾರಸ್ಸಿನ ಮೇರೆಗೆ ಗದಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವೀಣಾ ಕಟ್ನಳ್ಳಿ ಸೇರಿದಂತೆ ನಾಲ್ವರನ್ನು ಆರಾಧನಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.
ಮಹಿಳಾ ವಿಭಾಗದಲ್ಲಿ ವೀಣಾ ಕಟ್ನಳ್ಳಿ, ಸಾಮಾನ್ಯ ವಿಭಾಗದಲ್ಲಿ ರಾಮಕೃಷ್ಣ ನರಸಿಂಹರಾವ್ ಕಮಿತಕರ, ಪರಿಶಿಷ್ಟ ಜಾತಿ ವಿಭಾಗದಲ್ಲಿ ಮಹಾಲಿಂಗಪೂರದ ಶ್ರೀನಿವಾಸ್ ನಾಯಕ, ಪರಿಶಿಷ್ಟ ಪಂಗಡ ವಿಭಾಗದಲ್ಲಿ ನಾಗಾವಿಯ ಶಿವಾನಂದ ತಳವಾರ ಅವರು ಗದಗ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಆರಾಧನಾ ಸಮಿತಿಗೆ ನಾಲ್ವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ಮಾಡುವಂತೆ ಶಿಫಾರಸು ನೀಡಿದ್ದರ ಹಿನ್ನೆಲೆಯಲ್ಲಿ ತಹಸೀಲಾರ ಶ್ರೀನಿವಾಸಮೂರ್ತಿ ಕುಲಕರ್ಣಿ ಆದೇಶ ಹೊರಡಿಸಿದ್ದಾರೆ.
ಮಾಜಿ ಶಾಸಕ ಡಿ.ಆರ್. ಪಾಟೀಲ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನೀಲಮ್ಮ ಬೋಳನವರ, ಜಿ.ಪಂ ಮಾಜಿ ಅಧ್ಯಕ್ಷೆ ಸುಜಾತಾ ದೊಡ್ಡಮನಿ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಜಾನಕಿ ಮಲ್ಲಾಪೂರ, ಕೆಪಿಸಿಸಿ ಮಹಿಳಾ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಬೆನಕಣ್ಣವರ, ಕುಸುಮಾ ಬೆಳಗಟ್ಟಿ, ನಗರಸಭೆ ಮಾಜಿ ಅಧ್ಯಕ್ಷೆ ರುದ್ರಮ್ಮ ಕೆರಕಲಮಟ್ಟಿ, ಮುಖಂಡರಾದ ಲೀಲಾವತಿ ಸಂಕಣ್ಣವರ, ಶೃತಿ ಕಮತರ, ವಾಣಿ ಹಿರೇಮಠ ಹಾಗೂ ಜಿಲ್ಲಾ ಮಹಿಳಾ ಕಾಂಗ್ರೆಸ್ಸಿನ ಮುಖಂಡರು ಆಯ್ಕೆಯಾದ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ.