ಕುಂದುಕೊರತೆಗಳಿಗೆ ಶೀಘ್ರವೇ ಪರಿಹಾರ : ದಿವ್ಯಪ್ರಭು ಜಿಆರ್‌ಜೆ

0
Public Grievance Program
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ ಹೇಳಿದರು.

Advertisement

ಬುಧವಾರ ಜಿಲ್ಲಾಡಳಿತ ಧಾರವಾಡ ಹಾಗೂ ತಾಲೂಕು ಆಡಳಿತ ಹುಬ್ಬಳ್ಳಿ ಇವರ ಸಹಯೋಗದೊಂದಿಗೆ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದಿನ ಸಾರ್ವಜನಿಕ ಅಹವಾಲು ಸ್ವೀಕಾರದಲ್ಲಿ ಒಟ್ಟು 54 ಅರ್ಜಿಗಳು ಸ್ವೀಕೃತಗೊಂಡಿವೆ. ಅದರಲ್ಲಿ 37 ಅರ್ಜಿಗಳು ಹುಬ್ಬಳ್ಳಿ ನಗರಕ್ಕೆ ಸಂಬಂಧಪಟ್ಟಿದ್ದು, 12 ಅರ್ಜಿಗಳು ಗ್ರಾಮಿಣ ಭಾಗಕ್ಕೆ ಸಂಬಂಧಿಸಿವೆ. ಉಳಿದ 5 ಅರ್ಜಿಗಳು ಇತರೆ ತಾಲೂಕುಗಳಿಗೆ ಸಂಬಂಧಿಸಿವೆ. ಇವುಗಳಲ್ಲಿನ ಸುಮಾರು ೨೦ ಅರ್ಜಿಗಳು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಸಂಬಂಧಿಸಿದ ರಸ್ತೆ ದುರಸ್ತಿ, ಮನೆ ನಿರ್ಮಾಣ, ಕೊಳಚೆ ಪ್ರದೇಶಗಳ ಅಭಿವೃದ್ಧಿ, ಮೂಲ ಸೌಕರ್ಯಗಳ ಬಗ್ಗೆ ಸಂಬಂಧಿಸಿವೆ. ಈ ಕುರಿತು ಅಧಿಕಾರಿಗಳಿಗೆ ತಿಳಿಸಿ, ಪರಿಹರಿಸುವಂತೆ ಸೂಚಿಸಲಾಗುವುದು. ಇವುಗಳ ಜೊತೆಗೆ ಪಿಂಚಣಿ ಮತ್ತು ಆಧಾರ್ ಸಂಬಂಧಿತ ಅರ್ಜಿಗಳನ್ನು ಪರಿಹರಿಸಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳಲ್ಲಿ ಯಾವ ರೀತಿಯಲ್ಲಿ ತೊಂದರೆಗಳಿವೆ ಎಂಬುದಕ್ಕೆ ಸ್ಥಳ ವೀಕ್ಷಣೆ ಬಳಿಕವೇ ಪರಿಹಾರ ದೊರಯಲಿದೆ. ಅಧಿಕಾರಗಳ ನಿರ್ಲಕ್ಷ್ಯದಿಂದ ಸಹ ಕೆಲವು ಸಲ ಅರ್ಜಿಗಳು ವಿಲೇವಾರಿಯಾಗದೇ ಹಾಗೇ ಉಳಿದುಕೊಳ್ಳುತ್ತವೆ. ಅಲ್ಲದೇ ಅರ್ಜಿಗಳು ಕಾನೂನು ತೊಂದರೆಗಳಿಂದ ವಿಳಂಬವಾಗುತ್ತವೆ. ಅಧಿಕಾರಿಗಳು ಶೀಘ್ರವಾಗಿ ಸಾರ್ವಜನಿಕರ ಅರ್ಜಿಗಳನ್ನು ವಿಲೇವಾರಿ ಮಾಡಿ ಪರಿಹಾರ ಒದಗಿಸಬೇಕೆಂದು ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ ಶಹರ ತಹಸೀಲ್ದಾರ ಕಲಗೌಡ್ ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಪ್ರಕಾಶ ನಾಶಿ, ಹುಬ್ಬಳ್ಳಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರ ಹೊಸಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here