HomeEducationಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ದಿ. ಯು.ಎನ್. ಹೊಳಲಾಪೂರರ ಜನ್ಮದಿನದ ಪ್ರಯುಕ್ತ ಇತ್ತೀಚೆಗೆ ಜರುಗಿದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಡಿ.ಆರ್. ಪಾಟೀಲ ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ವಿದ್ಯಾರ್ಥಿಗಳಿಗೆ ಸನ್ಮಾನ ನೆರವೇರಿಸಿದರು. ಕಾರ್ಯಕ್ರಮದ ಆಯೋಜನೆಯನ್ನು ಮಹೇಂದ್ರ ಉಡಚಣ್ಣವರ ಮತ್ತು ಸಂಗಡಿಗರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜಿ.ಎಸ್. ಗಡ್ಡದ್ದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಲಕ್ಷ್ಮಣಗೌಡ ಪಾಟೀಲ, ಕೆಪಿಸಿಸಿ ಮಹಿಳಾ ಪ್ರಧಾನ ಕಾರ್ಯದರ್ಶಿ ಸುಜಾತಾ ದೊಡ್ಡಮನಿ, ಕಾಂಗ್ರೆಸ್ ಮುಖಂಡ ಟಿ.ಈಶ್ವರ, ವಾಸಣ್ಣ ಕುರಡಗಿ, ಹುಮಾಯೂನ್ ಮಾಗಡಿ, ಜಿ.ಆರ್. ಕೊಪ್ಪದ, ಡಿ.ಡಿ. ಮೋರನಾಳ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here

E-Paper

E-paper

Must Read

spot_img