HomeGadag Newsಯುವಕರಿಂದ ದೇಶದ ಅಭಿವೃದ್ಧಿ ಸಾಧ್ಯ : ಸಿದ್ಧರಾಮ ಶ್ರೀಗಳು

ಯುವಕರಿಂದ ದೇಶದ ಅಭಿವೃದ್ಧಿ ಸಾಧ್ಯ : ಸಿದ್ಧರಾಮ ಶ್ರೀಗಳು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಯುವಕರು ದೇಶದ ಅಭಿವೃದ್ಧಿಯ ಕಡೆಗೆ ವಿಶೇಷ ಗಮನಹರಿಸಬೇಕು. ಯುವಕರಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಮಾತನಾಡಿದರು.

ಲಿಂಗಾಯತ ಪ್ರಗತಿಶೀಲ ಸಂಘದ 2697ನೇ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಐ.ಟಿ.ಐ. ತರಬೇತಿ ಕೇಂದ್ರಗಳು ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿವೆ.

ನಮ್ಮ ಗುರುಗಳಾದ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು ಗ್ರಾಮೀಣ ಭಾಗದಲ್ಲಿ ಹೆಚ್ಚು ಐ.ಟಿ.ಐ. ತರಬೇತಿ ಕೇಂದ್ರಗಳನ್ನು ಸ್ಥಾಪಿಸಿದ್ದಾರೆ. ಬಹಳಷ್ಟು ವಿದ್ಯಾರ್ಥಿಗಳು ಕೈಗಾರಿಕೆಗಳಲ್ಲಿ, ಸರಕಾರಿ ಇಲಾಖೆಗಳಲ್ಲಿ ಉದ್ಯೋಗ ಪಡೆದು ಜೀವನ ರೂಪಿಸಿಕೊಳ್ಳುತ್ತಿದ್ದಾರೆ. ಯುವಕರು ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯುವಕರು ಪರಿಶ್ರಮಿಗಳಾಗಬೇಕು ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಅರಳಿ ನಾಗರಾಜ ಮಾತನಾಡಿ, ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಲ್ಲಿ ಕೀಳರಿಮೆ ಇರಬಾರದು. ಕಲಿತವರೆಲ್ಲರೂ ನೌಕರಿಯ ಮೇಲೆ ಹೆಚ್ಚು ಅವಲಂಬನೆ ಆಗಬಾರದು. ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಸಾಮರ್ಥ್ಯ ಇರುತ್ತದೆ. ಆ ಸಾಮರ್ಥ್ಯ ಅರಿತು ಬೆಳೆಯಬೇಕು ಎಂದರು.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ಬಸವಪ್ರಭು ಹಿರೇಮಠ ಮಾತನಾಡಿದರು. ಮಾಜಿ ಸಚಿವ ಎಸ್.ಎಸ್. ಪಾಟೀಲ ಉಪಸ್ಥಿತರಿದ್ದರು. ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ ರಚಿಸಿದ ‘ದೇಶದ ಚಿತ್ತ ಯುವಜನರತ್ತ’ ಕೃತಿಯನ್ನು ಲೋಕಾರ್ಪಣೆಗೊಳಿಸಲಾಯಿತು.

ಪ್ರತಿಭಾವಂತ ಐ.ಟಿ.ಐ. ವಿದ್ಯಾರ್ಥಿಗಳಿಗೆ ಉಚಿತ ಟೂಲ್‌ಕಿಟ್ ವಿತರಣೆ ಮಾಡಲಾಯಿತು.

ಮೃತ್ಯುಂಜಯ ಹಿರೇಮಠ ಮತ್ತು ಗುರುನಾಥ ಸುತಾರ ತಂಡದವರು ವಚನ ಸಂಗೀತ ಹಾಡಿದರು.

ಧರ್ಮಗ್ರಂಥ ಪಠಣವನ್ನು ಸಾಕ್ಷಿ ರವಿ ದೇವರಡ್ಡಿ, ವಚನ ಚಿಂತನೆಯನ್ನು ರೇಖಾ ರವಿ ದೇವರಡ್ಡಿ ಮಾಡಿದರು. ಶಿವಾನುಭವದ ದಾಸೋಹ ಭಕ್ತಿಸೇವೆಯನ್ನು ವಹಿಸಿಕೊಂಡಿದ್ದ ಶರಣ ಸಾಹಿತಿ ಎಸ್.ಆರ್. ನರೇಗಲ್ ಹಾಗೂ ನಿವೃತ್ತ ಶಿಕ್ಷಕರು ಮತ್ತು ಜೆ.ಟಿ.ವಿ.ಪಿ. ಐ.ಟಿ.ಐ. ಸಿಬ್ಬಂದಿ ವರ್ಗ ಅವರನ್ನು ಪೂಜ್ಯರು ಸಂಮಾನಿಸಿದರು.

ಸರ್ವರನ್ನು ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಕಳಸಾಪೂರ ಸ್ವಾಗತಿಸಿದರು. ರತ್ನಕ್ಕ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಬಾಲಚಂದ್ರ ಭರಮಗೌಡರ, ರೇಣುಕಾ ವಿ.ಕರೇಗೌಡ್ರ, ಕಾರ್ಯದರ್ಶಿ ಮಹೇಶ ಗಾಣಿಗೇರ, ಸಹಕಾರ್ಯದರ್ಶಿ ವಿಜಯಕುಮಾರ ಹಿರೇಮಠ, ವಿರುಪಾಕ್ಷಪ್ಪ ಅರಳಿ, ಸಂಘಟನಾ ಕಾರ್ಯದರ್ಶಿ ಅಶೋಕ ಹಾದಿ, ಕೋಶಾಧ್ಯಕ್ಷ ಸುರೇಶ ನಿಲೂಗಲ್, ಶಿವಾನುಭವ ಸಮಿತಿ ಚೇರಮನ್ ವಿವೇಕಾನಂದಗೌಡ ಪಾಟೀಲ ಉಪಸ್ಥಿತರಿದ್ದರು.

‘ಐ.ಟಿ.ಐ. ತರಬೇತಿ ಮತ್ತು ಅದರ ಮಹತ್ವ’ ಕುರಿತು ಬೋಜರಾಜ ಸೊಪ್ಪಿಮಠ ಉಪನ್ಯಾಸ ನೀಡಿ, ಓದಲಿಕ್ಕೆ, ಬರೆಯಲಿಕ್ಕೆ, ಒಳ್ಳೆಯದು ಕೆಟ್ಟದ್ದನ್ನು ಅರಿಯಲು, ಜೀವನವನ್ನು ರೂಪಿಸಿಕೊಳ್ಳಲಿಕ್ಕೆ, ಸೈದ್ಧಾಂತಿಕ ವಿಷಯಗಳಲ್ಲಿ ನಡೆಯಲು ಶಿಕ್ಷಣ ಬಹಳ ಅವಶ್ಯ. 10ನೇ ತರಗತಿಯಲ್ಲಿ ಕಡಿಮೆ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಅಲ್ಪಾವಧಿಯಲ್ಲಿ ನಮ್ಮ ಕೈಗಾರಿಕಾ ತರಬೇತಿ ಕೇಂದ್ರಗಳು ಭವಿಷ್ಯವನ್ನು ನೀಡುತ್ತಿವೆ ಎಂದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!